ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!
Horrific bike accident; A young man died on the spot…!!!
Horrific bike accident; A young man died on the spot…!!!
ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ನಡೆದಿದೆ.
ಆಚಾಪುರ ಗ್ರಾಮದ ಅತಿಕ್ ( 21) ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ಆನಂದಪುರದಿಂದ ಸಂತೆ ಮುಗಿಸಿ ಆಚಾಪುರ ಕಡೆ ತೆರಳುತ್ತಿದ್ದಾಗ ಅತಿಕ್ ರವರ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಅತಿಕ್ ರವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಹಿಂಬದಿ ಸವಾರ ಅರುಣ್ ಗೂ ತಲೆಗೆ ತೀವ್ರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳೀಯರ ಹೇಳಿಕೆ ಪ್ರಕಾರ ಬುಲೆರೋ ಪಿಕಪ್ ವಾಹನ ಎದುರು ಭಾಗದಿಂದ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಹೋಗಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…