January 11, 2026

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

1003420246.webp

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಹಿಂದೂ ಪರ ಸಂಘಟನೆಗಳ ವತಿಯಿಂದ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಹತ್ಯೆಯನ್ನ ಖಂಡಿಸಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಇಂದು ಹೊಸನಗರದ ಮುಖ್ಯ ಬಸ್ ನಿಲ್ದಾಣದ ಬಳಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ದಿಕ್ಕಾರ ಕೂಗಿ ಟೈರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಮುಖ್ಯಬಸ್ ನಿಲ್ದಾಣದಲ್ಲಿ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಹಾಗೂ ಮೆರೆವಣಿಗೆ ಮೂಲಕ ಸಾಗಿ  ತಹಶಿಲ್ದಾರರ ಮೂಲಕ ರಾಜ್ಯಪಾಲರಿಗೆ ಹಿಂದೂಗಳಿಗೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಪ್ರಮುಖರಾದ ಉಮೇಶ್ ಕಂಚುಗಾರ್, ಸುಭ್ರಹ್ಮಣ್ಯ ಕೆ ವಿ, ಸುರೇಶ್ ಸ್ವಾಮಿರಾವ್, ನಗರ ನಿತಿನ್, ಆಲುವಳ್ಳಿ ವಿರೇಶ್, ಎಂ ಎನ್ ಸುಧಾಕರ್, ಧನ್ಯಶ್ರಿ ರಮೇಶ್, ಸುಧೀಂದ್ರ ಪಂಡಿತ್ ಹಾಗೂ ಹಲವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *