ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ
ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ
ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23) ಎಂಬುವವರನ್ನು ಶ್ರೀಮಂತ ಶಾಂತಮಲ್ಲಪ್ಪ ಭಕರೆ ಕೊಲೆ ಮಾಡಿದ್ದಾನೆ.
‘ಎರಡು ವರ್ಷಗಳ ಹಿಂದೆ ಸೃಷ್ಟಿ ಮತ್ತು ಶ್ರೀಮಂತ ಅವರ ಮದುವೆ ಆಗಿತ್ತು. ಗ್ರಾಮದ ಯುವಕ ಖಾಜಪ್ಪ ಜತೆ ಸೃಷ್ಟಿ ಅಕ್ರಮ ಸಂಬಂಧ ಹೊಂದಿದ್ದಳು. ರಾತ್ರಿ ಪತಿ ಇಲ್ಲದಿದ್ದಾಗ ಖಾಜಪ್ಪ ಮನೆಗೆ ಬಂದಿದ್ದ. ಪತ್ನಿ ಹಾಗೂ ಪ್ರಿಯಕರ ಮನೆಯಲ್ಲಿ ಇದ್ದುದ್ದನ್ನು ನೋಡಿದ ಶ್ರೀಮಂತ ಇಬ್ಬರನ್ನೂ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಮಾದನ ಹಿಪ್ಪರಗಿ ಪೊಲೀಸ್ ಠಾಣೆಗೆ ತೆರಳಿ ತಾನೇ ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಆರೋಪಿ ಶ್ರೀಮಂತ ಗುರುವಾರ ರಾತ್ರಿ ಕಲ್ಲಂಗಡಿ ಬೆಳೆಗೆ ಮಲ್ಚಿಂಗ್ ಮಾಡುವ ಉದ್ಯೋಗ ಮಾಡುತ್ತಿದ್ದ. ಅದೇ ಕೆಲಸಕ್ಕೆ ಬೇರೆಯವರ ಹೊಲಕ್ಕೆ ಹೋಗಿದ್ದ. ಮನೆಗೆ ಬರುವುದು ತಡವಾಗುತ್ತದೆ ಎಂದು ಪತ್ನಿ ಸೃಷ್ಟಿಗೆ ಕರೆ ಮಾಡಿ ತಿಳಿಸಿದ್ದ. ಹೀಗಾಗಿ ಸೃಷ್ಟಿ ಪ್ರಿಯಕರನಿಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದಾಳೆ. ಪಲ್ಸರ್ ಬೈಕ್‌ನಲ್ಲಿ ಬಂದ ಖಾಜಪ್ಪ ಸೃಷ್ಟಿ ಮನೆಯೊಳಗೆ ಹೋಗಿದ್ದಾನೆ. ಇದನ್ನು ಗಮನಿಸಿದ ಓಣಿಯ ಕೆಲವರು ಮನೆಯ ಹೊರಭಾಗದಲ್ಲಿ ಕೀಲಿ ಹಾಕಿ ಶ್ರೀಮಂತನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣವೇ ಹೊರಟು ಬಂದ ಶ್ರೀಮಂತ ಕೊಡಲಿ ತೆಗೆದುಕೊಂಡು ಮನೆಯೊಳಗೆ ಹೋಗಿದ್ದಾನೆ. ತನ್ನ ಪತ್ನಿಯೊಂದಿಗೆ ಇದ್ದ ಖಾಜಪ್ಪನನ್ನು ಮನೆಯ ಹಿಂಬದಿಗೆ ಕರೆದೊಯ್ದು ಮನಬಂದಂತೆ ಕಡಿದು ಕೊಲೆ ಮಾಡಿದ್ದಾನೆ. ಶವವನ್ನು ಮನೆಯೊಳಗೆ ತಂದು ಹಾಕಿದ್ದಾನೆ. ನಂತರ ಪತ್ನಿಯನ್ನೂ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಪಂಪ್ ಆಪರೇಟರ್ ಹುದ್ದೆಗೆ ಆಯ್ಕೆ: ಕೊಲೆಯಾದ ಖಾಜಪ್ಪನಿಗೆ ಗ್ರಾಮ ಪಂಚಾಯಿತಿಯಲ್ಲಿ ಪಂಪ್ ಆಪರೇಟರ್ ಹುದ್ದೆಗೆ ನೇಮಕವಾಗಿತ್ತು. ಕೆಲವೇ ದಿನಗಳಲ್ಲಿ ಕೆಲಸಕ್ಕೆ ಸೇರಿಕೊಳ್ಳುವವನಿದ್ದ. ಅಷ್ಟರಲ್ಲಿ ಕೊಲೆ ನಡೆದಿದೆ. ತನ್ನ ಪತ್ನಿಯೊಂದಿಗೆ ಖಾಜಪ್ಪ ಸಂಬಂಧ ಹೊಂದಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಶ್ರೀಮಂತ ಭಕರೆ ಎರಡು ಬಾರಿ ಎಚ್ಚರಿಕೆ ನೀಡಿದ್ದ. ಆದರೂ, ಎಚ್ಚರಿಕೆ ನಿರ್ಲಕ್ಷಿಸಿ ಸಂಬಂಧ ಮುಂದುವರೆಸಿದ್ದರು ಎನ್ನಲಾಗಿದೆ.
ಶುಕ್ರವಾರ ಬೆಳಿಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್‌ಪಿ ಗೋಪಿ ಆರ್., ಸಿಪಿಐ ಪ್ರಕಾಶ ಯಾತನೂರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…