Breaking
12 Jan 2026, Mon

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23) ಎಂಬುವವರನ್ನು ಶ್ರೀಮಂತ ಶಾಂತಮಲ್ಲಪ್ಪ ಭಕರೆ ಕೊಲೆ ಮಾಡಿದ್ದಾನೆ.

‘ಎರಡು ವರ್ಷಗಳ ಹಿಂದೆ ಸೃಷ್ಟಿ ಮತ್ತು ಶ್ರೀಮಂತ ಅವರ ಮದುವೆ ಆಗಿತ್ತು. ಗ್ರಾಮದ ಯುವಕ ಖಾಜಪ್ಪ ಜತೆ ಸೃಷ್ಟಿ ಅಕ್ರಮ ಸಂಬಂಧ ಹೊಂದಿದ್ದಳು. ರಾತ್ರಿ ಪತಿ ಇಲ್ಲದಿದ್ದಾಗ ಖಾಜಪ್ಪ ಮನೆಗೆ ಬಂದಿದ್ದ. ಪತ್ನಿ ಹಾಗೂ ಪ್ರಿಯಕರ ಮನೆಯಲ್ಲಿ ಇದ್ದುದ್ದನ್ನು ನೋಡಿದ ಶ್ರೀಮಂತ ಇಬ್ಬರನ್ನೂ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಮಾದನ ಹಿಪ್ಪರಗಿ ಪೊಲೀಸ್‌ ಠಾಣೆಗೆ ತೆರಳಿ ತಾನೇ ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಆರೋಪಿ ಶ್ರೀಮಂತ ಗುರುವಾರ ರಾತ್ರಿ ಕಲ್ಲಂಗಡಿ ಬೆಳೆಗೆ ಮಲ್ಚಿಂಗ್ ಮಾಡುವ ಉದ್ಯೋಗ ಮಾಡುತ್ತಿದ್ದ. ಅದೇ ಕೆಲಸಕ್ಕೆ ಬೇರೆಯವರ ಹೊಲಕ್ಕೆ ಹೋಗಿದ್ದ. ಮನೆಗೆ ಬರುವುದು ತಡವಾಗುತ್ತದೆ ಎಂದು ಪತ್ನಿ ಸೃಷ್ಟಿಗೆ ಕರೆ ಮಾಡಿ ತಿಳಿಸಿದ್ದ. ಹೀಗಾಗಿ ಸೃಷ್ಟಿ ಪ್ರಿಯಕರನಿಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದಾಳೆ. ಪಲ್ಸರ್ ಬೈಕ್‌ನಲ್ಲಿ ಬಂದ ಖಾಜಪ್ಪ ಸೃಷ್ಟಿ ಮನೆಯೊಳಗೆ ಹೋಗಿದ್ದಾನೆ. ಇದನ್ನು ಗಮನಿಸಿದ ಓಣಿಯ ಕೆಲವರು ಮನೆಯ ಹೊರಭಾಗದಲ್ಲಿ ಕೀಲಿ ಹಾಕಿ ಶ್ರೀಮಂತನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣವೇ ಹೊರಟು ಬಂದ ಶ್ರೀಮಂತ ಕೊಡಲಿ ತೆಗೆದುಕೊಂಡು ಮನೆಯೊಳಗೆ ಹೋಗಿದ್ದಾನೆ. ತನ್ನ ಪತ್ನಿಯೊಂದಿಗೆ ಇದ್ದ ಖಾಜಪ್ಪನನ್ನು ಮನೆಯ ಹಿಂಬದಿಗೆ ಕರೆದೊಯ್ದು ಮನಬಂದಂತೆ ಕಡಿದು ಕೊಲೆ ಮಾಡಿದ್ದಾನೆ. ಶವವನ್ನು ಮನೆಯೊಳಗೆ ತಂದು ಹಾಕಿದ್ದಾನೆ. ನಂತರ ಪತ್ನಿಯನ್ನೂ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಪಂಪ್ ಆಪರೇಟರ್ ಹುದ್ದೆಗೆ ಆಯ್ಕೆ: ಕೊಲೆಯಾದ ಖಾಜಪ್ಪನಿಗೆ ಗ್ರಾಮ ಪಂಚಾಯಿತಿಯಲ್ಲಿ ಪಂಪ್ ಆಪರೇಟರ್ ಹುದ್ದೆಗೆ ನೇಮಕವಾಗಿತ್ತು. ಕೆಲವೇ ದಿನಗಳಲ್ಲಿ ಕೆಲಸಕ್ಕೆ ಸೇರಿಕೊಳ್ಳುವವನಿದ್ದ. ಅಷ್ಟರಲ್ಲಿ ಕೊಲೆ ನಡೆದಿದೆ. ತನ್ನ ಪತ್ನಿಯೊಂದಿಗೆ ಖಾಜಪ್ಪ ಸಂಬಂಧ ಹೊಂದಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಶ್ರೀಮಂತ ಭಕರೆ ಎರಡು ಬಾರಿ ಎಚ್ಚರಿಕೆ ನೀಡಿದ್ದ. ಆದರೂ, ಎಚ್ಚರಿಕೆ ನಿರ್ಲಕ್ಷಿಸಿ ಸಂಬಂಧ ಮುಂದುವರೆಸಿದ್ದರು ಎನ್ನಲಾಗಿದೆ.

ಶುಕ್ರವಾರ ಬೆಳಿಗ್ಗೆ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್‌ಪಿ ಗೋಪಿ ಆರ್., ಸಿಪಿಐ ಪ್ರಕಾಶ ಯಾತನೂರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version