RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು
RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶಿವಪುರ ಸಮೀಪದ ಹುಳಿಗದ್ದೆ ಗ್ರಾಮದ ಮಂಜುನಾಥ್ ಕೋಂ ಶೇಖರಪ್ಪ ಶೆಟ್ಟಿ (39) ಮೃತ ದುರ್ಧೈವಿಯಾಗಿದ್ದಾರೆ.ಇವರು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯ ಚಾಲುಕ್ಯ ಬಾರ್ ಮುಂಭಾಗದಲ್ಲಿ ಎಗ್ ರೈಸ್ ಅಂಗಡಿ ನಡೆಸುತಿದ್ದರು.
ಮಂಗಳವಾರ ರಾತ್ರಿ 10 ಗಂಟೆಗೆ ಎಗ್ ರೈಸ್ ಅಂಗಡಿಯನ್ನು ಮುಚ್ಚಿ ಶಿವಪುರದ ತಮ್ಮ ನಿವಾಸಕ್ಕೆ ಟಿವಿಎಸ್ ಸ್ಟಾರ್ ಸಿಟಿ(KA-15 X 9927) ಬೈಕ್ ನಲ್ಲಿ ತೆರಳುತಿದ್ದಾಗ ತೀರ್ಥಹಳ್ಳಿ ಕಡೆಯಿಂದ ಸಾಗರ ಕಡೆಗೆ ತೆರಳುತಿದ್ದ ಬೊಲೆರೋ ಪಿಕಪ್ (KA 17 D 9197) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮಂಜುನಾಥ್ ಗೆ ಗಂಭೀರ ಗಾಯಗಳಾಗಿತ್ತು ಕೂಡಲೇ ಸ್ಥಳಿಯರ ಸಹಕಾರದಿಂದ ಗಾಯಾಳುವನ್ನು ಮೆಗ್ಗಾನ್ ಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…