ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ
ಮೆಟ್ರೊದಲ್ಲಿ ಉದ್ಯೋಗವಕಾಶ
ಬೆಂಗಳೂರಿನ ಮೆಟ್ರೊ ರೈಲು ಕಾರ್ಪೊರೇಷನ್‌ನಲ್ಲಿ 150 ಮೆಂಟೇನರ್ ಹುದ್ದೆಗಳಿಗಾಗಿ ಐ.ಟಿ.ಐ. ಅಥವಾ ಎನ್‌ಸಿವಿಟಿ/ ಎನ್‌ಸಿಟಿವಿಟಿ/ಎನ್‌ಎಸಿಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ 50 ವರ್ಷದೊಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯು 5 ವರ್ಷಗಳಿಗೆ ಗುತ್ತಿಗೆ ಆಧಾರವಾಗಿದ್ದು, ನಂತರ ವೈಯಕ್ತಿಕ ಕಾರ್ಯಕ್ಷಮತೆಗೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ವೇತನ ₹ 25,000ದಿಂದ ₹ 59,060 (ವಾರ್ಷಿಕ ಬಡ್ತಿ ಶೇ 3) ಮತ್ತು ಬಿಎಂಆರ್‌ಸಿಎಲ್‌ನ ಒ ಅಂಡ್ ಎಂ ವಿಂಗ್‌ಗೆ ಲಭ್ಯವಿರುವ ಇತರೆ ಭತ್ಯೆಗಳನ್ನು ನೀಡಲಾಗುವುದು. ಆಸಕ್ತರು ಮೇ 22 ರೊಳಗಾಗಿ ಇಲಾಖೆಯ ವೆಬ್‌ಸೈಟ್ www.bmrc.co.in/careers ರಲ್ಲಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ helpdesk@bmrc.co.in ಅನ್ನು ಸಂಪರ್ಕಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ಕಾಲೇಜು ಹಾಗೂ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. (job news today ) ಇವರ ಅವಧಿ 1 ವರ್ಷದ್ದಾಗಿರುತ್ತದೆ. ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ವಿವರ; ಕನ್ನಡ ಭಾಷಾ ಶಿಕ್ಷಕರು-7, ಇಂಗ್ಲಿಷ್ ಭಾಷಾ ಶಿಕ್ಷಕರು-9, ಹಿಂದಿ ಭಾಷಾ ಶಿಕ್ಷಕರು-4, ಉರ್ದು ಭಾಷಾ ಶಿಕ್ಷಕರು-2, ಗಣಿತ ಶಿಕ್ಷಕರು-4, ಸಾಮಾನ್ಯ ವಿಜ್ಞಾನ ಶಿಕ್ಷಕರು-4, ಸಮಾಜ ವಿಜ್ಞಾನ ಶಿಕ್ಷಕರು-8, ಕಂಪ್ಯೂಟರ್ ಶಿಕ್ಷಕರು-2, ದೈಹಿಕ ಶಿಕ್ಷಣ ಶಿಕ್ಷಕರು-2, ಒಟ್ಟು-42. ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ವಿವರ; ಕನ್ನಡ ಭಾಷಾ ಶಿಕ್ಷಕರು-3, ಇಂಗ್ಲಿಷ್ ಭಾಷಾ ಶಿಕ್ಷಕರು-3, ಉರ್ದು ಭಾಷಾ ಶಿಕ್ಷಕರು-3, ಗಣಿತ ಶಿಕ್ಷಕರು-3, ಭೌತ ವಿಜ್ಞಾನ ಉಪನ್ಯಾಸಕರು-3, ರಸಾಯನ ವಿಜ್ಞಾನ ಉಪನ್ಯಾಸಕರು-3, ಜೀವ ವಿಜ್ಞಾನ ಉಪನ್ಯಾಸಕರು-3, ವ್ಯವಹಾರ ಅಧ್ಯಯನ ಉಪನ್ಯಾಸಕರು-1, ಲೆಕ್ಕಶಾಸ್ತ್ರ ಉಪನ್ಯಾಸಕರು -2, ಕಂಪ್ಯೂಟರ್ ಸೈನ್ಸ್ ಉಪನ್ಯಾಸಕರು-1, ಅರ್ಥಶಾಸ್ತ್ರ ಉಪನ್ಯಾಸಕರು-1, ಇತಿಹಾಸ ಉಪನ್ಯಾಸಕರು-1, ಒಟ್ಟು 27 ಉಪನ್ಯಾಸಕರು.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ ಹಾಗೂ ಎಲ್ಲಾ ತಾಲೂಕು ಮಾಹಿತಿ ಕೇಂದ್ರ ಕಚೇರಿಗಳಲ್ಲಿ ಅಥವಾ ವೆಬ್‌ಸೈಟ್ https://dom.karnataka.gov.in ರಿಂದ ಪಡೆದು, ಮೇ 19 ರೊಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ -7676888388, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029 ಹಾಗೂ ಸಾಗರ-7338222907 ಸಂಪರ್ಕಿಸಬಹುದು.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…