ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ

ಶರಾವತಿ ಹಾಗೂ ಇನ್ನಿತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಿತು.

ಸೊಪ್ಪಿನ ಬೆಟ್ಟ, ಕಾನು ಭೂಮಿಗಳ ಅನಧೀಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆದಳ ಪತ್ರಗಳನ್ನು ಕಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ (ಪಿಎಫ್) ಎಂಬ ಉಲ್ಲೇಖವನ್ನು ಕೈಬಿಡುವುದು, ಮೀಸಲು ಅರಣ್ಯದ ಅಂತಿಮ ಅಧಿಸೂಚನೆಗೆ ಕಾಲಮಿತಿ ನಿಗದಿಪಡಿಸುವುದು ಮತ್ತು ಅನುಮೋದನೆ ನೀಡುವುದು, ಮೈಸೂರು ಸರ್ಕಾರದಿಂದ ನೀಡಲಾದ ಹಕ್ಕುಪತ್ರಗಳಿಗೆ ಇ-ಸ್ವತ್ತು ದಾಖಲೆ ಸೃಜಿಸುವುದು, ಸರ್ಕಾರದ ವಿವಿಧ ನೀರಾವರಿ ಹಾಗೂ ವಿದ್ಯುತ್ ಯೋಜನೆಗಳ ಮುಳುಗಡೆ ಸಂತ್ರಸ್ತರ ಪುನರ್ವಸತಿ ಜಮೀನುಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವುದು, 1978ರ ಏ.27ರ ಪೂರ್ವದ ಮೂರು ಎಕರೆ ಅರಣ್ಯ ಭೂಮಿಯನ್ನು ಸಕ್ರಮಗೊಳಿಸುವುದು ಮತ್ತು ಅರಣ್ಯ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಜತೆಗೆ ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಚಕ್ರ, ಸಾವೆಹಕ್ಲು, ಭದ್ರ, ತುಂಗಾ ಹಾಗೂ ಇನ್ನಿತರೆ ವಿದ್ಯುತ್ ಮತ್ತು ನೀರಾವರಿ ಯೋಜನೆಗಳ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 0.05 ಗುಂಟೆ ಒಳಗಿನ ವಿಸ್ತೀರ್ಣದ ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ಮಾಡುವ ಕುರಿತು ಸಭೆಯಲ್ಲಿ ಗಮನ ಸೆಳೆಯಲಾಯಿತು.

ಈ ಎಲ್ಲ ವಿಚಾರಗಳ ಬಗ್ಗೆ ಸರ್ಕಾರವು ಅಗತ್ಯ ಕ್ರಮ ಕೈಗೊಂಡು ಜಿಲ್ಲೆಯ ಮುಳುಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವಂತೆ ಸಚಿವ ಮಧು ಬಂಗಾರಪ್ಪ ಅವರು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ಗಮನಕ್ಕೆ ತಂದರು. ಮುಖ್ಯ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ದಶಕಗಳಿಂದ ನನೆಗುದಿಗೆ ಬಿದ್ದಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯವಾಸಿಗಳ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ದೊರೆಯುವ ಆಶಾಭಾವನೆ ಮೂಡಿಸಿದರು.

ಸಭೆಯಲ್ಲಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಶಾರದಾ ಪೂರ್ಯಾನಾಯ್ಕ, ಎಂಎಲ್‌ಸಿ ಬಲ್ಕಿಷ್ ಬಾನು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್, ಪ್ರಮುಖರಾದ ಬಿ.ಎ.ರಮೇಶ್ ಹೆಗ್ಡೆ, ಜಯಂತ್, ಶೇಖರ್ ಸೇರಿದಂತೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

2 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

4 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago