POSTMAN NEWS

ನೈಜ ಸುದ್ದಿ ನೇರ ಬಿತ್ತರ..

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

GridArt 20250514 201107209.jpg

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ ; ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವಿತರಿಸಿದರು.

ಬಾಳೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಅರಿವು ಕೇಂದ್ರ’ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಪೋಷಕರಿಗೆ ಚೆಕ್ ನ್ನು ಹಸ್ತಾಂತರಿಸಲಾಯಿತು.

ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಲ್ಲಿ ಪದವಿ ಓದುತಿದ್ದ ಯುವಕ ಕಾರ್ತಿಕ್ ಮೃತಪಟ್ಟಿದ್ದು, ಮೃತ ಯುವಕನ ತಂದೆ ಶಂಕರಪ್ಪರವರಿಗೆ 5 ಲಕ್ಷ ರೂ ಗಳ ಪರಿಹಾರ ಧನದ ಚೆಕ್ ನ್ನು ಹಸ್ತಾಂತರಿಸಿ, ಸಾಂತ್ವನ ಹೇಳಿದರು.

ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಘಟನೆಯ ಹಿನ್ನಲೆ :

ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ 2024 ರ ಜುಲೈ ತಿಂಗಳಿನಲ್ಲಿ ನಡೆದಿತ್ತು.ಕಾರ್ತಿಕ್ ಎಸ್ (19) ಮೃತಪಟ್ಟಿದ್ದರು

ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ.ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ ಬಿದ್ದಿತ್ತು ಹಾಗಾಗಿ ಈ ದುರ್ಘಟನೆ ನಡೆದಿದೆ.ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದನು.

ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ತೆರಳಿದ್ದು ಮುಂದಿನ ತನಿಖೆ ಕೈಗೊಂಡಿದ್ದರು.

MLA Belur Gopalakrishna distributed a compensation cheque to the family of a youth who died in an electrical accident.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.