ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ
ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕೆಂಚನಾಲ ಗ್ರಾಪಂ ಅಧ್ಯಕ್ಷರಾಗಿದ್ದ ಉಬೇದುಲ್ಲಾ ಷರೀಫ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ ಅವಧಿಯೊಳಗೆ ಬೇರೆ ಯಾರು ನಾಮಪತ್ರ ಸಲ್ಲಿಸದೇ ಇರುವುದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಚುನಾವಣಾಧಿಕಾರಿಯಾಗಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕಾರ್ಯ ನಿರ್ವಹಿಸಿದ್ದರು.
ಅಭಿನಂದನೆಗಳ ಮಹಾಪೂರ :



ಕೆಂಚನಾಲ ಗ್ರಾಪಂ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಹಮ್ಮದ್ ಷರೀಫ್ ರವರಿಗೆ ಪಕ್ಷಾತೀತವಾಗಿ ವಿವಿಧ ಪಕ್ಷಗಳ ಮುಖಂಡರುಗಳು , ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಶುಭಾಷಯ ಕೋರಿದರು.
ಈ ಸಂಧರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಉಬೇದುಲ್ಲಾ ಷರೀಫ಼್ , ತಾಲೂಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ ,ಪಿಎಸೈ ಪ್ರವೀಣ್ ಎಸ್ ಪಿ ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ , ಜೆಡಿಎಸ್ ಮುಖಂಡರಾದ ಅರ್ ಎ ಚಾಬುಸಾಬ್ , ಎಪಿಎಂಸಿ ಮಾಜಿ ಅಧ್ಯಕ್ಷ ಹಾರೋಹಿತ್ಲು ಈಶ್ವರಪ್ಪ ಗೌಡ , ಉಮಾಕರ್ , ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ನಿರೂಪ್ ಕುಮಾರ್ , ಗಣಪತಿ , ಕೆಂಚನಾಲ ಗ್ರಾಪಂ ಸದಸ್ಯರಾದ ಕೃಷ್ಣೋಜಿರಾವ್ , ರಮ್ಯಾ ಶಶಿಕುಮಾರ್ ,ಪುಟ್ಟಮ್ಮ , ಹೂವಮ್ಮ ರಾಮಪ್ಪ, ಉಷಾ ಮಂಜುನಾಥ್ , ಪಿಡಿಓ ರವಿಕುಮಾರ್ ಸಿ ಕೆ ಇದ್ದರು.