
ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ
ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ(ರಿ) ಹಾಗೂ ಸ್ತ್ರೀಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಯನೂರು ಇವರ ಸಹಯೋಗದಲ್ಲಿ ಒಕ್ಕೂಟ ವ್ಯಾಪ್ತಿಯ ಸಂಘಗಳ ಸದಸ್ಯರ ಹುಟ್ಟುಹಬ್ಬದ ಪ್ರಯುಕ್ತ ಆಯನೂರು ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗಾಗಿ ಚೈತನ್ಯ ಅನ್ನ ಕಾರ್ಯಕ್ರಮವನ್ನು ನಡೆಸಲಾಯಿತು. ಆಯನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಗಂಗಾ ನಾಯ್ಕ ಮಾತನಾಡಿ, ಹಸಿದವರಿಗಾಗಿ ಅನ್ನ ಕಾರ್ಯಕ್ರಮ ಏರ್ಪಡಿಸಿರುವುದು ವಿನೂತನ ಕಾರ್ಯಕ್ರಮವಾಗಿದೆ. ಬಡಮಹಿಳೆಯರು ಇಂಥ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷವಾಗಿದೆ….