ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

0
GridArt_20250531_210456226

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.

ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ.

ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.

ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್‌ಐ ಪಿ.ಎಸ್. ಶರತ್ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಸುಳಿವಿನ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

About The Author

Leave a Reply

Your email address will not be published. Required fields are marked *