ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ
ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ
ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ
ರಿಪ್ಪನ್ ಪೇಟೆ : ಅಪ್ರಾಪ್ತ ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ಫೋಕ್ಸೋ ಕಾಯ್ದೆಯಡಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ , ಮದುವೆಯಾಗದೇ ಇದ್ದರೇ ವಿಷ ಕುಡಿಯುವುದಾಗಿ ಬೆದರಿಕೆ ಒಡ್ಡಿರುವ ಆರೋಪದ ಮೇರೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ 23 ವರ್ಷದ ಯುವಕನೊಬ್ಬನನ್ನು ಬಂಧಿಸಿ ನ್ಯಾಯಾಂಗದ ಮುಂದೆ ಹಾಜರುಪಡಿಸಲಾಗಿ ಜೈಲಿಗೆ ಕಳುಹಿಸಲಾಗಿದೆ.
ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತಿದ್ದಂತೆ ಆರೋಪಿ ಯುವಕನನ್ನು ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ,ರಿಪ್ಪನ್ ಪೇಟೆ ಪಿಎಸ್ ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಂಡಿದ್ದಾರೆ.