RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

0
JPEG_20250529_212801_1361191309244223608_wm (1)

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು.

ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ಎಚ್ಚರಿಕೆ ನೀಡಿದರು.

ಪ್ರತಿಯೊಬ್ಬ ರೌಡಿಶೀಟರ್ ಗಳ ಚಲನವಲನಗಳ ಮೇಲೆ ಇಲಾಖೆ ಕಣ್ಣಿಟ್ಟಿರುತ್ತದೆ. ಪದೇ ಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕಾನೂನು ಜಾರಿಗೊಳಿಸಿ, ಗಡಿಪಾರು ಮಾಡುವ ಕೆಲಸ ಮಾಡಲಾಗುವುದು ಎಂದು ಎಚ್ಚರಿಸಿದರು.

ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಪಾಲ್ಗೊಳ್ಳವ ಕುರಿತು ಇಲಾಖೆ ಗಮನಕ್ಕೆ ಬಂದರೆ ಕಾನೂನು ಕ್ರಮವನ್ನು ಮುಲಾಜಿಲ್ಲದೆ ಕೈಗೊಳ್ಳಲಾಗುವುದು ಎಂದು ವಾರ್ನಿಂಗ್ ನೀಡಿದರು.

ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ , ರಾಮಚಂದ್ರ ಹಾಗೂ ಅವಿನಾಶ್ ಇದ್ದರು.

About The Author

Leave a Reply

Your email address will not be published. Required fields are marked *