RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ
RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ
RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ
ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು.
ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ಎಚ್ಚರಿಕೆ ನೀಡಿದರು.
ಪ್ರತಿಯೊಬ್ಬ ರೌಡಿಶೀಟರ್ ಗಳ ಚಲನವಲನಗಳ ಮೇಲೆ ಇಲಾಖೆ ಕಣ್ಣಿಟ್ಟಿರುತ್ತದೆ. ಪದೇ ಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕಾನೂನು ಜಾರಿಗೊಳಿಸಿ, ಗಡಿಪಾರು ಮಾಡುವ ಕೆಲಸ ಮಾಡಲಾಗುವುದು ಎಂದು ಎಚ್ಚರಿಸಿದರು.
ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಪಾಲ್ಗೊಳ್ಳವ ಕುರಿತು ಇಲಾಖೆ ಗಮನಕ್ಕೆ ಬಂದರೆ ಕಾನೂನು ಕ್ರಮವನ್ನು ಮುಲಾಜಿಲ್ಲದೆ ಕೈಗೊಳ್ಳಲಾಗುವುದು ಎಂದು ವಾರ್ನಿಂಗ್ ನೀಡಿದರು.
ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ , ರಾಮಚಂದ್ರ ಹಾಗೂ ಅವಿನಾಶ್ ಇದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply