SSLC ಫಲಿತಾಂಶ | ರಿಪ್ಪನ್‌ಪೇಟೆ: ರಾಮಕೃಷ್ಣ ವಿದ್ಯಾಲಯಕ್ಕೆ ಸತತ 9ನೇ ಬಾರಿ ಶೇ.100 ಫಲಿತಾಂಶ

SSLC ಫಲಿತಾಂಶ | ರಿಪ್ಪನ್‌ಪೇಟೆ: ರಾಮಕೃಷ್ಣ ವಿದ್ಯಾಲಯಕ್ಕೆ ಸತತ 9ನೇ ಬಾರಿ ಶೇ.100 ಫಲಿತಾಂಶ

ರಿಪ್ಪನ್‌ಪೇಟೆ : ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ಫಲಿತಾಂಶವನ್ನು ಪಡೆದಿದೆ.

ಸತತವಾಗಿ 9ನೇ ಬಾರಿಗೆ 100% ಫಲಿತಾಂಶ ಪಡೆದಿರುವ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 31 ವಿದ್ಯಾರ್ಥಿಗಳು ಪರೀಕ್ಷೆ ಕುಳಿತಿದ್ದು 31 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪೋಷಕರಿಗೆ ಹಾಗೂ ಶಿಕ್ಷಣ ಸಂಸ್ಥೆಯವರಿಗೆ ಹೆಮ್ಮೆ ತಂದಿದ್ದಾರೆ.

ಮೈತ್ರಿ 625/622 (99.52%)ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಸುಜನ್ 625/603(96.48%) ದ್ವಿತೀಯ ಸ್ಥಾನ ಪಡೆದಿರುತ್ತಾರೆ,ಸಂಭ್ರಮ 625/595(95.2%) ತೃತೀಯ ಸ್ಥಾನ ಪಡೆದಿರುತ್ತಾರೆ,

ಅತ್ಯುನ್ನತ ಶ್ರೇಣಿಯಲ್ಲಿ 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶ್ರೀ ಶಾರದಾ ಇಂಗ್ಲಿಷ್ ಮೀಡಿಯಂ ಶಾಲೆಗೆ 90.24 ಫಲಿತಾಂಶ

ರಿಪ್ಪನ್ ಪೇಟೆ : ಇಲ್ಲಿನ  ಶ್ರೀ ಶಾರದಾ ಇಂಗ್ಲೀಷ್ ಮೀಡಿಯಂ ಶಾಲೆ 2024-25ಸಾಲಿನ SSLC  ಪರೀಕ್ಷೆಯಲ್ಲಿ 90.24% ಫಲಿತಾಂಶ ಬಂದಿದೆ

24 ವಿದ್ಯಾರ್ಥಿ ಗಳು ಪರೀಕ್ಷೆಯನ್ನು ಬರೆದಿದ್ದು 21 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ವಿದ್ಯಾರ್ಥಿನಿ ನವ್ಯ 625/564 (90.24%)ಅಂಕಗಳನ್ನು ಪಡೆದಿರುತ್ತಾರೆ

ಅತ್ಯುನ್ನತ ಶ್ರೇಣಿಯಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಪ್ರಥಮ ಶ್ರೇಣಿಯಲ್ಲಿ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

SSLC ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಎಲ್ಲಾ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ವತಿಯಿಂದ ಅಭಿನಂದನೆಗಳು…….

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

13 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago