POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಆಪರೇಷನ್ ಸಿಂಧೂರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

IMG 20250512 WA0014.jpg

ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ವ್ಯಕ್ತಿ ಬಂಧನಕ್ಕೆ ಆಗ್ರಹ

ಶಿವಮೊಗ್ಗ: ಸೋಮವಾರ  ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ  ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು.

ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ ಎಂದು ತಿಳಿಸಿ, ಸಂಬಂಧಿತ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಕೈಗೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟಾಗಳ ಸಂಯೋಜಕರಾದ ದತ್ತಾತ್ರಿ, ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ದೀನ ದಯಾಳು ಸೇರಿದಂತೆ ಬಿಜೆಪಿ ನಗರದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದ ವ್ಯಕ್ತಿಯ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಸುಮೋಟೊ ಪ್ರಕರಣ ದಾಖಲಾಗಿದೆ.
ಪಾಕ್‌ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮೇ ೭ರಂದು ಭಾರತೀಯ ಸೇನಾಪಡೆಗಳು ದಾಳಿ ನಡೆಸಿದ್ದವು. ಈ ವೇಳೆ, ದಾಳಿ ಸಂಬಂಧಿಸಿದ ವಿಡಿಯೋ ತುಣಕನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಶಿವಮೊಗ್ಗದ ಇಬ್ಬು ಅಲಿಯಾಸ್ ಇಬ್ರಾಹಿಂ ಖಾನ್ ಎಂಬಾತನ ವಿರುದ್ಧ ಕೇಸ್ ದಾಖಲಾಗಿದೆ.


ಕೋಟೆ ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್ ಪ್ರಕಾಶ್ ಎಂಬವರು ಇಬ್ಬು ಅಲಿಯಾಸ್ ಇಬ್ರಾಹಿಂ ವಿರುದ್ದ ದೂರು ನೀಡಿದ್ದಾರೆ. ಭಾರತ ದೇಶದ ಪ್ರಜೆಯಾಗಿ, ದೇಶದ ರಕ್ಷಣೆ ಪಡೆದು ಪಾಕಿಸ್ತಾನದ ಪರವಾಗಿ ದೇವರಲ್ಲಿ ಬೇಡಿಕೊಂಡಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕಾನ್ಸ್‌ಟೆಬಲ್ ನೀಡಿದ ಆಧಾರದ ಮೇಲೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.