ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಕೊಡಗು: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ.
ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಮೃತ ವಿದ್ಯಾರ್ಥಿನಿ. ತೇಜಸ್ವಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಸ್ಥಳಕ್ಕೆ ಪೊನ್ನಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆರು ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾಳೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.
ತೇಜಸ್ವಿನಿ ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಕೂಡ ಹುಟ್ಟು ಹಬ್ಬದ ನಿಮಿತ್ತ, ಸ್ನೇಹಿತರಿಗೆ ಸಿಹಿ ಹಂಚಿದ್ದಳು.
ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಆತ್ಮಹತ್ಯೆಗೆ ಶರಣಾಗಿದ್ದು. 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು.
ನಂತರ ಸ್ನೇಹಿತರು ಎಷ್ಟೇ ಕೂಗಿದರೂ ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…