ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ
ರಿಪ್ಪನ್ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು.
ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಂಥಾಲಯದವರು ಆಯೋಜಿಸಲಾದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಆತಿಥಿಯಾಗಿ ಭಾಗವಹಿಸಿ ಮಾತನಾಡಿ ಬೇಸಿಗೆ ಶಿಬಿರದ ಮೂಲಕ ಮಕ್ಕಳಿಗೆ ಸಾಂಸ್ಕೃತಿಕ ಹಾಗೂ ಸಂಸ್ಕಾರವನ್ನು ನೀಡಿ ಸುಸಂಸ್ಕೃತರನ್ನಾಗಿ ಮಾಡಲು ಉತ್ತಮ ವೇದಿಕೆಯಾಗಿದೆ ಎಂದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷಿö್ಮ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಂಸ್ಕೃತಿಕ ಚಟುವಟಿಕೆಯೊಂದಿಗೆ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚು ಅಧ್ಯತೆ ಕಲ್ಪಿಸುವ ವೇದಿಕೆಯಾಗಿದೆ ಎಂದರು.
ಗ್ರಾಮ ಪಂಚಾಯಿತ್ ಸದಸ್ಯ ಗಣಪತಿ ಗವಟೂರು, ಜಿ.ಡಿ.ಮಲ್ಲಿಕಾರ್ಜುನ,ಪಿಡಿಓ ನಾಗರಾಜ್,ಕಾರ್ಯದರ್ಶಿ ಮಧುಶ್ರೀ, ಗಣಕ ಯಂತ್ರದ ಅಪರೇಟರ್ ಲಕ್ಷಿ ನಾಗರಾಜ್, ಪಂಚಾಯತ್ ಸಿಬ್ಬಂದಿವರ್ಗ ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್