ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್
ಟ್ರಾಫಿಕ್ ಪೊಲೀಸರ ಅಜಾಗರೂಕತೆಯ ಪರಿಣಾಮ ಮಂಡ್ಯದಲ್ಲಿ ಮೂರು ವರ್ಷದ ಮಗು ರಸ್ತೆ ಅಪಘಾತಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ನಾಯಿ ಕಚ್ಚಿದ್ದ ಮಗುವನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ.ಈ ವೇಳೆ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ ಎಂದು ತಿಳಿಸಿದ ನಂತರ ಪೊಲೀಸರು ಹೊರಡಲು ಹೇಳಿದ್ದು, ಈ ವೇಳೆ ಪಕ್ಕಕ್ಕೆ ಚಲಿಸುವಾಗ ಬೈಕ್ ಸ್ಕಿಡ್ ಆಗಿದೆ. ಆದ್ರೆ ಈ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಟೆಂಪೋ ಗಾಡಿಗೆ ಗುದ್ದಿದ್ದು ಮಗು ಕೆಳಗೆ ಬಿದ್ದು ಸಾವಿಗೀಡಾಗಿದೆ.
ಈ ಘಟನೆಯಿಂದ ಮಗುವಿನ ಪೋಷಕರು ಮತ್ತು ಸಾರ್ವಜನಿಕರು ಪೊಲೀಸರ ವಿರುದ್ಧ ರೊಚ್ಚಿಗೆದ್ದು ಪ್ರತಿಭಟನೆಗೆ ಮುಂದಾಗಿದ್ದು ಈ ಘಟನೆಗೆ ಕಾರಣರಾದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೀಗೆ ಪರಿಸ್ಥಿತಿ ಕೈಮೀರುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಮಾಹಿತಿ ತರಿಸಿಕೊಂಡ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಒಟ್ಟು 6 ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ ಕೇವಲ ಸಸ್ಪೆಂಡ್ ಮಾಡಿದ್ರೆ ಸಾಲದು, ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್.ಐ.ಆರ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.