ಮುಂಗಾರು ಆರಂಭದಲ್ಲೇ ತುಂಬಿದ ತುಂಗೆ – 5 ಕ್ರಸ್ಟ್ ಗೇಟುಗಳಿಂದ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಮುಂಗಾರು ಆರಂಭದಲ್ಲೇ ತುಂಬಿದ ತುಂಗೆ – ೫ ಕ್ರಸ್ಟ್ ಗೇಟುಗಳಿಂದ  ೨ ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಶಿವಮೊಗ್ಗ: ಮುಂಗಾರುಪೂರ್ವ ಮಳೆಗೆ ತುಂಗಾ ಅಣೆಕಟ್ಟು ಭರ್ತಿಯಾಗಿದ್ದು, ೫ ಕ್ರಸ್ಟ್ ಗೇಟುಗಳ ಮೂಲಕ ನದಿಗೆ ೨ ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮವಾಗಿ ತುಂಬುವ ಅಣೆಕಟ್ಟಾಗಿದೆ.

ಅಣೆಕಟ್ಟೆಗೆ ೭,೫೦೦ ಕ್ಯೂಸೆಕ್ ನೀರು ಒಳ ಹರಿವು ಇರುವ ಕಾರಣ ಐದು ಕ್ರಸ್ಟ್ ಗೇಟ್‌ಗಳ ಮೂಲಕ ೨ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇನ್ನೂ ಒಂದು ವಾರದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದೆ. ಆಗ ಡ್ಯಾಂನಿಂದ ಇನ್ನಷ್ಟು ನೀರು ನದಿಗೆ ಬಿಡುವ ಸಾಧ್ಯತೆ ಇದೆ.

ತುಂಬಿದ ತುಂಗಾ ಅಣೆಕಟ್ಟು:

ರಾಜ್ಯದ ಅತಿ ಚಿಕ್ಕ ಅಣೆಕಟ್ಟು ತುಂಗಾ ಅಣೆಕಟ್ಟು. ಈ ಅಣೆಕಟ್ಟು ಈಗಾಗಲೇ ತುಂಬಿದೆ. ಅಣೆಕಟ್ಟೆಯ ಒಟ್ಟು ಎತ್ತರ ೫೮೮.೨೪ ಮೀಟರ್. ಹಾಲಿ ಅಣೆಕಟ್ಟೆಯಲ್ಲಿ ೫೮೭.೫೪ ಅಡಿ ನೀರು ಸಂಗ್ರಹವಾಗಿದೆ. ಅಣೆಕಟ್ಟು ತುಂಬಲು ಒಂದು ಅಡಿ ಮಾತ್ರ ಬಾಕಿ ಇದೆ. ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಅಣೆಕಟ್ಟೆಗೆ ಒಳ ಹರಿವು ಹೆಚ್ಚುತ್ತಿದೆ.

“ಇಂದು ಬೆಳಗ್ಗೆ ಅಣೆಕಟ್ಟೆಯಲ್ಲಿ ನೀರು ಸಂಗ್ರಹ ಜಾಸ್ತಿ ಆಗುತ್ತಿದ್ದಂತೆಯೇ ಜಲಾಶಯದಲ್ಲಿ ಇರುವ ಬೃಂದಾವನ ಜಲ ವಿದ್ಯುತ್ ಉತ್ಪಾದನಾ ಘಟಕಕ್ಕೆ ೫ ಸಾವಿರ ಕ್ಯೂಸೆಕ್ ನೀರು ಬಿಡಲಾಗಿತ್ತು. ಈಗ ಅಣೆಕಟ್ಟೆಗೆ ಒಳ ಹರಿವು ಹೆಚ್ಚಾದ ಕಾರಣಕ್ಕೆ ನದಿಗೆ ನೀರು ಬಿಡಲಾಗುತ್ತಿದೆ. ನದಿಗೆ ಒಟ್ಟು ೨೦೦೦ ಕ್ಯೂಸೆಕ್ ನೀರು ಬಿಡಲಾಗಿದೆ. ಅಣೆಕಟ್ಟೆಯಲ್ಲಿ ೩.೨೪ ಟಿಎಂಸಿ ನೀರು ಸಂಗ್ರಹವಾಗಿದೆ” ಎಂದು ತುಂಗಾ ಮೇಲ್ಡಂಡೆ ಯೋಜನೆಯ ಇಂಜಿನಿಯರ್ ತಿಪ್ಪ ನಾಯ್ಕ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಅಬ್ಬರದ ಮಳೆ:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ತಾಲೂಕಿನ ಆಗುಂಬೆ ೧೧೬.೨ ಮಿಮಿ,  ಹೊನ್ನೆತಾಳಿನಲ್ಲಿ ೧೦೫.೫ ಮಿಮಿ, ಬಿದರಗೋಡಿನಲ್ಲಿ ೯೩ ಮಿಮಿ, ಎರೆಹಳ್ಳಿಯಲ್ಲಿ ೭೧ ಮಿಮಿ, ಆರಗದಲ್ಲಿ ೬೮.೫ ಮಿಮಿ, ಮುಳಬಾಗಿಲಿನಲ್ಲಿ  ೬೭ ಮಿಮಿ, ನೆರಟೂರಿನಲ್ಲಿ ೬೫.೫ ಮಿಮಿ, ಹೊಸಹಳ್ಳಿಯಲ್ಲಿ ೬೫ ಮಿಮಿ,  ತೀರ್ಥಮತ್ತೂರಿನಲ್ಲಿ  ೫೫.೫ ಮಿಮಿ, ಮೇಗರವಳ್ಳಿಯಲ್ಲಿ ೫೯ ಮಿಮಿ, ಬೆಜ್ಜವಳ್ಳಿಯಲ್ಲಿ ೪೫.೫ ಮಿಮಿ,ಬಂದ್ಯ ಕುಕ್ಕೆ ೪೪.೫ ಮಿಮಿ,  ಸಾಗರದ ಖಂಡಿಕಾದಲ್ಲಿ ೬೩.೫ ಮಿಮಿ,  ಕೆಳದಿಯಲ್ಲಿ ೪೯ ಮಿಮಿ, ಮಾಳ್ವೆಯಲ್ಲಿ ೪೭ ಮಿಮಿ, ಕಲ್ಮನೆ ೪೫ ಮಿಮಿ, ಭೀಮನೇರಿಯಲ್ಲಿ ೪೦ ಮಿಮಿ ಮಳೆಯಾಗಿದೆ. ಹೊಸನಗರದಲಿ ೫೦.೪ ಮಿಮಿ, ಸೋನಾಲೆಯಲ್ಲಿ ೪೮ ಮಿಮಿ, ಮೇಲಿನ ಬೆಸಿಗದ ೫೯.೫ ಮಿಮಿ, ಸೊರಬದ ಗುಡವಿಯಲ್ಲಿ ೪೬.೫ ಮಿಮಿ, ನ್ಯಾಸಿರಿಯಲ್ಲಿ ೫೭ ಮಿಮಿ ಮಳೆಯಾಗಿದೆ.

ಜಲಾಶಯಗಳ ವಿವರ:

ತುಂಗಾ ಜಲಾಶಯದ ಒಳಹರಿವು ಹೆಚ್ಚಾಗಿದೆ. ೧೨ ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ೮ ಗೇಟು ಮತ್ತು ಪವರ್ ಹೌಸ್ ನಿಂದ ೧೨ ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಿನ್ನೆ ೪ ಗೇಟು ಮೇಲೆಕ್ಕೆ ಎತ್ತಿ ೭೫೦೦ ಕ್ಯೂಸೆಕ್ ನೀರು ಹರಿಸಲಾಗುತ್ತಿತ್ತು. ಇಂದು ನಾಲ್ಕುವರೆ ಸಾವಿರ ಕ್ಯೂಸೆಕ್ ನೀರು ಹೆಚ್ಚು ಹರಿದು ಬರುತ್ತಿದೆ.
ಭದ್ರಾ ಜಲಾಶಯಕ್ಕೆ ನೀರು ಹೆಚ್ಚಿನ ನೀರು ಹರಿದು ಬರುತ್ತಿದೆ. ನಿನ್ನೆ ೧೫೦ ಕ್ಯೂಸೆಕ್ ನೀರು ಹರಿದು ಬರುತ್ತಿದ್ದ ಒಳಹರಿವು ಇಂದು ಬೆಳಿಗ್ಗೆ ೩೫೦೦ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನಿನ್ನೆ ೧೩೬ ಅಡಿ ನೀರು ಇದ್ದ ಭದ್ರ ಜಲಾಶಯದಲ್ಲಿ ಇಂದು ೧೩೭.೬ ಅಡಿ ನೀರು ಸಂಗ್ರಹವಾಗಿದೆ.

ಲಿಂಗನಮಕ್ಕಿ:

ಲಿಂಗನಮಕ್ಕಿ ಜಲಾಶಯದಲ್ಲೂ ಇಂದು ನೀರಿನ ಒಳಹರಿವು ಹೆಚ್ಚಾಗಿದೆ. ನಿನ್ನೆ ೧೦,೯೦೦ ಕ್ಯೂಸೆಕ್ ನೀರು ಹರಿದು ಬರುತ್ತಿದ್ದ ಜಲಾಶಯಕ್ಕೆ ಇಂದು ೧೭೫೩೦ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ೧೫೧.೬೪ ಟಿಎಂಸಿ ನೀರು ಸಂಗ್ರಹದ ಜಲಾಶಯ ೧೮೧೯ ಅಡಿ ನೀರಿನ ಸಂಗ್ರಹದ ಸಾಮರ್ಥ್ಯ ಹೊಂದಿದೆ. ಶೇ.೨೧.೮೨ ರಷ್ಡು ನೀರು ಸಂಗ್ರಹವಾಗಿದೆ ೧೭೬೪.೮೪ ಅಡಿ ನೀರು ಸಂಗ್ರಹವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago