ಬೆಳಗಿನಜಾವ ಬಸ್ ಹತ್ತಿದ ಮಹಿಳೆ – ಸ್ವಲ್ಪ ದೂರ ತೆರಳಿದಾಗ ಕಾದಿತ್ತು ಆಘಾತ
Woman boards early morning bus – shock awaits her after walking a short
Woman boards early morning bus – shock awaits her after walking a short distance
ಶಿವಮೊಗ್ಗ: ಬೆಳಗಿನ ಜಾವ ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ನಿಂದ ಬಂಗಾರದ ನೆಕ್ಲೇಸ್ ಇದ್ದ ಬಾಕ್ಸ್ ಕಳ್ಳತನ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೃತ್ಯ ನಡೆದಿದೆ.
ಭದ್ರಾವತಿಯ ಮುಕ್ತ ಎಂಬುವವರಿಗೆ ಸೇರಿದ ನೆಕ್ಲೇಸ್ ಕಳುವಾಗಿದೆ. ಕುಟುಂಬ ಸಹಿತ ಹುಬ್ಬಳ್ಳಿಗೆ ತೆರಳಲು ಬೆಳಗಿನ ಜಾವ 5 ಗಂಟೆಗೆ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಬಸ್ ಹತ್ತಿದ್ದರು. ಬಸ್ಸು ಶಿವಮೊಗ್ಗದ ಹೊನ್ನಾಳಿ ರಸ್ತೆಯ ಮೇಲ್ಸೇತುವೆ ಬಳಿ ತೆರಳುವಾಗ, ಮುಕ್ತ ಅವರು ಮಕ್ಕಳಿಗೆ ಕರೆ ಮಾಡಲು ವ್ಯಾನಿಟಿ ಬ್ಯಾಗ್ನಲ್ಲಿದ್ದ ಮೊಬೈಲ್ಗೆ ತೆಗೆಯಲು ಮುಂದಾದರು. ಆಗ ಜಿಪ್ ತೆರೆದಿರುವುದು ಗಮನಕ್ಕೆ ಬಂತು.ಬ್ಯಾಗ್ನ ಒಳಗೆ ಇಟ್ಟಿದ್ದ ಬಂಗಾರದ ನೆಕ್ಲೇಸ್ ಇದ್ದ ಬಾಕ್ಸ್ ಕಳ್ಳತನವಾಗಿತ್ತು.
ಮದುವೆ ಮುಗಿಸಿಕೊಂಡು ಶಿವಮೊಗ್ಗಕ್ಕೆ ಹಿಂತಿರುಗಿದಾಗ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್