ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ
ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ.
100 ವರ್ಷದ ಸಿದ್ದಮ್ಮ ಮೃತಪಟ್ಟವರು.ಇವರು ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಮನೆಯಲ್ಲಿದ್ದ ಹೇಮಾವತಿ ಎಂಬುವರಿಗೆ ಗಾಯವಾಗಿದ್ದು, ಅವರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದಂತೆ ಅವರ ಕುಟುಂಬ ಸದಸ್ಯರಾದ ಪಲ್ಲವಿ, ಪರಶುರಾಮ್, ಚೇತನ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ.
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…
ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…