ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್
ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ.
ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ ಪಕ್ಕದಲ್ಲಿಯೇ ಮರ ಬಿದ್ದಿದ್ದು ಕೂದಲೆಳೆ ಅಂತರದಲ್ಲಿ ವಾಹನ ಜಖಂಗೊಳ್ಳುವುದರಿಂದ ಪಾರಾಗಿದೆ.
ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸ್ ಸಿಬ್ಬಂದಿಗಳು ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದ್ದು ಗ್ರಾಪಂ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.