ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ.
ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.
ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ. ಆಟೋ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಅದೃಷ್ಟವಶಾತ್ ಆಟೋದಲ್ಲಿ ಪ್ಯಾಸೆಂಜರ್ ಇರಲಿಲ್ಲ.
ಇನ್ನು ಸುಜುಕಿ ಕ್ಯಾರಿ ಶಾಮಿಯಾನ ವಾಹನದ ಮುಂಭಾಗ ಜಖಂಗೊಂಡಿದ್ದು ಚಾಲಕನಿಗೆ ಯಾವುದೇ ತೊಂದರೆ ಆಗಿಲ್ಲ ಎನ್ನಲಾಗಿದೆ. ಓವರ್ ಟೇಕ್ ಮಾಡಲು ಹೋಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್