ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ

ರಿಪ್ಪನ್ ಪೇಟೆ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ರವರನ್ನು ನಾಮನಿರ್ದೇಶನಗೊಳಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಆದೇಶಿಸಿದೆ.

ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅಮೀರ್ ಹಂಜಾರವರನ್ನು ಈ ಕೂಡಲೇ  ಜಾರಿಗೆ ಬರುವಂತೆ ಪ್ರಧಾನಮಂತ್ರಿಗಳ 15 ಅಂಶ ಅನುಷ್ಠಾನ ಸಮಿತಿಗೆ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ನೇಮಕಗೊಳಿಸಿ ಆದೇಶಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಅಮೀರ್ ಹಂಜಾ ರವರು ನನ್ನನ್ನು ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಆಯ್ಕೆ ಮಾಡಲು ಸಹಕರಿಸಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ , ಶಾಸಕ ಬೇಳೂರು ಗೋಪಾಲಕೃಷ್ಣ , ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ರವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

About The Author

Leave a comment