ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ

ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಬಳಿ ಮೂರು ಜಾನುವಾರುಗಳನ್ನು  ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಬಳ್ಳಿ ಬೈಲಿನಿಂದ ಆನಂದಪುರ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಪರಿಶೀಲಿಸಿದಾಗ, ಅಕ್ರಮವಾಗಿ ಹಿಂಸಾತ್ಮಕವಾಗಿ ಒಂದು ಎಮ್ಮೆ, ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು ಸ್ಥಳೀಯ ವ್ಯಕ್ತಿಯೊಬ್ಬರಿಂದ ಖರೀದಿಸಿ ಮಾಂಸ ಮಾರಾಟದ ಉದ್ದೇಶದಿಂದ ದಿಂಡದಹಳ್ಳಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ.

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.