ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ
ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಬಳಿ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಬಳ್ಳಿ ಬೈಲಿನಿಂದ ಆನಂದಪುರ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಪರಿಶೀಲಿಸಿದಾಗ, ಅಕ್ರಮವಾಗಿ ಹಿಂಸಾತ್ಮಕವಾಗಿ ಒಂದು ಎಮ್ಮೆ, ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು ಸ್ಥಳೀಯ ವ್ಯಕ್ತಿಯೊಬ್ಬರಿಂದ ಖರೀದಿಸಿ ಮಾಂಸ ಮಾರಾಟದ ಉದ್ದೇಶದಿಂದ ದಿಂಡದಹಳ್ಳಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…