ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!
ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ.
ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.
ನಿನ್ನೆ ಚಿತ್ರೀಕರಣ ಮುಗಿಸಿ ರಾತ್ರಿ ಊಟ ಮಾಡಿದ್ದಯುವ ಕಲಾವಿದನಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದರು ಸಹ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಮೇ 6 – ಜೂನಿಯರ್ ಕಲಾವಿದ ಕಪಿಲ್, ಸೌಪರ್ಣಿಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಮೇ 12ಕ್ಕೆ ಕುಂದಾಪುರದಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಹೃದಯಾಘಾತದಿಂದ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದರು.ಈಗ ಯುವ ಕಲಾವಿದ ಕೇರಳದ ವಿಜು ವಿಕೆ ಸಾವನ್ನಪ್ಪಿದ್ದಾರೆ. ಕಾಂತಾರ ಚಿತ್ರತಂಡದಲ್ಲಿ ಇದು 3ನೇ ಸಾವಾಗಿದ್ದು ಎಲ್ಲರಿಗೂ ಶಾಕ್ ಕೊಟ್ಟಿದೆ.
ಈ ಹಿಂದೆ ದೈವ ಶೂಟಿಂಗ್ ಟೈಮಲ್ಲಿ ಎಚ್ಚರದಿಂದ ಇರುವಂತೆ ಸೂಚಿಸಿತ್ತು. ದೈವ ಸೂಚಿಸಿದ ಬಳಿಕ ಇದೀಗ 3ನೇ ಕಲಾವಿದ ಸಾವನ್ನಪ್ಪಿದ್ದಾರೆ. ಕಾಂತಾರ ಚಿತ್ರತಂಡಕ್ಕೆ 3ನೇ ಸಾವಿನಿಂದ ಬಿಗ್ ಶಾಕ್ ಆಗಿದೆ. ಕುಂದಾಪುರದಲ್ಲಿ ಸೆಟ್‌ನಲ್ಲಿ ಒಂದು ಸಲ ಬೆಂಕಿ ಬಿದ್ದಿತ್ತು. ಇನ್ನೊಂದು ಸಲ ಕಲಾವಿದರಿದ್ದ ಟಿಟಿ ಆಕ್ಸಿಡೆಂಟ್ ಆಗಿತ್ತು. ಹೀಗೆಯೇ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply