ಶಿವಮೊಗ್ಗ ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮನ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಮೇಲೆ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ.
ಹಳೇಬೊಮ್ಮನಕಟ್ಟೆಯ ಶೇಖರಪ್ಪ ಎಂಬುವವರ ಪುತ್ರ ಅವಿನಾಶ್ (32) ಕೊಲೆಗೀಡಾದವ.
ಅವಿನಾಶ್ 10 ವರ್ಷಗಳ ಹಿಂದೆ ನಡೆದ ರೌಡಿ ಶೀಟರ್ ತಮಿಳುಗಿರಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ನ್ಯಾಯಾಲಯ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪೆರೋಲ್ ಮೇಲೆ ಅವಿನಾಶ್ ಈಚೆಗೆ ಮನೆಗೆ ಬಂದಿದ್ದನು ಎಂದು ತಿಳಿದುಬಂದಿದೆ. ಕೊಲೆ ನಡೆದ ಸ್ಥಳದಲ್ಲಿ ಮದ್ಯದ ಬಾಟಲಿ ದೊರೆತಿದ್ದು, ತಡರಾತ್ರಿ ವರೆಗೆ ಪಾರ್ಟಿ ಮಾಡಿ ನಂತರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಹೈಕೋರ್ಟ್ ಜಾಮೀನಿನ ಮೇಲೆ ಒಂದು ವರ್ಷದ ಕೆಳಗೆ ಹೊರಗೆ ಬಂದಿದ್ದ ಅವಿನಾಶ್ ಕೊಲೆಯಾಗಿ ಶವವಾಗಿ ಬಿದ್ದಿದ್ದನ್ನ ಬೊಮ್ಮನ್ ಕಟ್ಟೆಯ ಕೆರೆ ಏರಿಯಾ ಮೇಲೆ ಓಡಾಡುವ ರೈತರು ವಿನೋಬ ನಗರ ಠಾಣೆಗೆ ಮಾಹಿತಿ ನೀಡಿದ್ದಾರೆ.
ರಾತ್ರಿ 9 ಗಂಟೆಗೆ ಊಟ ಮುಗಿಸಿಕೊಂಡು ಮನೆಯಿಂದ ಹೊರಗೆ ಹೋದಾಗ ವಾಪಾಸ್ ಆಗಿಲ್ಲ. ಸ್ಥಳದಲ್ಲಿ ಮಚ್ಚು ದೊರೆತಿದೆ ಎಂದು ತಂದೆ ಶೇಖರಪ್ಪ ಹೇಳಿದ್ದಾರೆ. ಊರಿನಲ್ಲಿ ಅವಿನಾಶ್ ಚೆನ್ನಾಗಿದ್ದ. ಸ್ನೇಹಿತರೊಂದಿಗೆ ಚೆನ್ನಾಗಿ ಬೆರೆಯುತಿದ್ದ ಎಂದು ಗ್ರಾಮಸ್ಥ ಶ್ರೀನಿವಾಸ್ ತಿಳಿಸಿದ್ದಾರೆ.
ಸ್ಥಳಕ್ಕೆ ಅಡಿಷನಲ್ ಎಷ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಡಿವೈಎಸ್ಪಿ ಸಂಜೀವ್ ಕುಮಾರ್, ವಿನೋಬನಗರ ಪಿಐ ಸಂತೋಷ್ ಕುಮಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ತಂದೆಯ ಆಕ್ರಂಧನ ಮುಗಿಲು ಮುಟ್ಟಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply