ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು

ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ.

ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು(ten month baby) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ(Mangalore) ಶನಿವಾರ ಮಧ್ಯಾಹ್ನ ನಡೆದಿದೆ.

ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ(Bihar) ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ.

ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಅಪರಾಹ್ನ 3:30ಕ್ಕೆ ಮಗುವನ್ನು ವೆನ್ಲಾಕ್(venlak hospital) ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 10:25ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.

ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *