ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು.

ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಗೃಹ ರಕ್ಷಕ ದಳವನ್ನು 1962ರಲ್ಲಿ ಸ್ಥಾಪನೆ ಮಾಡಲಾಯಿತು. ಅಂದಿನಿಂದ ಇಂದಿನವರೆಗೆ ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಹಿಂದೆ ಸ್ವಯಂ ಸೇವಕರಾಗಿ ದುಡಿಯಲು ಗೃಹರಕ್ಷಕ ದಳಕ್ಕೆ ಸೇರುವ ಜನರ ಸಂಖ್ಯೆ ವಿರಳವಾಗಿತ್ತು. ಆದರೆ ಕಾಲಕ್ರಮೇಣ ಭಾರತೀಯ ಸೈನ್ಯ, ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇದ್ದು, ಅವಕಾಶದಿಂದ ವಂಚಿತರಾದವರು, ಗೃಹರಕ್ಷಕ ಸೇರಿದರೆ ಸೈನಿಕ, ಪೊಲೀಸರಂತೆ ಕೆಲಸ ಮಾಡಬಹುದು ಎಂಬ ದೃಷ್ಟಿಯಿಂದ ಇತ್ತೀಚಿನ ದಿನಗಳಲ್ಲಿ ಗೃಹರಕ್ಷಕ ದಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ ಎಂದರು.

ಗೃಹರಕ್ಷಕ ದಳದಲ್ಲಿ ಹೆಚ್ಚಿನ ಶಿಸ್ತು ಅಗತ್ಯವಿದೆ. ಪ್ರತಿ ವಾರದ ಪರೇಡ್‌ ತರಬೇತಿಯಲ್ಲಿ ಭಾಗವಹಿಸಿ, ಶ್ರದ್ಧೆ ಹಾಗೂ ಶಿಸ್ತನ್ನು ಬೆಳೆಸಿಕೊಳ್ಳಬೇಕು. ಪೊಲೀಸರಂತೆ ಗೃಹರಕ್ಷಕರು ಖಾಕಿ ಸಮವಸ್ತ್ರದೊಂದಿಗೆ ಕರ್ತವ್ಯ ನಿರ್ವಹಿಸುತ್ತಾರೆ. ಸಮವಸ್ತ್ರದಲ್ಲಿದ್ದಾಗ ಶಿಸ್ತು, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದರು.

ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ವಿಚಾರದಲ್ಲಿ ಗೃಹ ರಕ್ಷಕರಿಗೆ ಹೆಚ್ಚಿನ ಜವಬ್ದಾರಿ ಇದೆ ಅದನ್ನು ಶ್ರದ್ದೆಯಿಂದ ಪಾಲಿಸಬೇಕು ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ಇದೇ ಸಂಧರ್ಭದಲ್ಲಿ ಶಿಬಿರಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಭಾರತದ ಪ್ರತಿಜ್ಞಾ ವಿಧಿ ಭೋದಿಸಲಾಯಿತು.

ಈ ಸಂಧರ್ಭದಲ್ಲಿ ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ,ಹೊಸನಗರ ಅಬಕಾರಿ ವೃತ್ತ ನಿರೀಕ್ಷಕ ನಾಗರಾಜ್ , ವಿಶೇಷ ಉಪನ್ಯಾಸಕರಾದ ಡಾ. ಸುಚಿತ್ರ , ತರಬೇತುದಾರರಾದ ಗಿರಿರಾಜ್ ರಿಪ್ಪನ್ ಪೇಟೆ ಪಿಎಸ್‌ಐ ರಾಜುರೆಡ್ಡಿ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

40 minutes ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

6 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

7 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago