POSTMANNEWS

ನೈಜ ಸುದ್ದಿ ನೇರ ಬಿತ್ತರ..

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು

ವಿಕೃತವಾಗಿ ಬಿಟ್ಟಯ ಪಾಪಿಗಳು ಮೇಯಲು ಹಸಿವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ.

ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ತಾಲೂಕಿನ ವಿಜಾಪುರದಲ್ಲಿ ನಡೆದಿದ್ದು.ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ನಂತರ ಸ್ಥಳೀಯರ ಸಹಕಾರದಿಂದ ಹಸುವನ್ನು ಮನೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ.

ಗ್ರಾಮದ ಕುಮಾರ್ ವಿಜಯ ಎಂಬವರಿಗೆ ಸೇರಿದ್ದ ಹಸು ಶನಿವಾರ ಮೇಯಲು ಹೋದ ಸಂದರ್ಭದಲ್ಲಿ ದುಷ್ಕರ್ಮಿಗಳು ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ.

ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

About The Author

Exit mobile version