HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ
ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಶಿವಮೊಗ್ಗದಿಂದ ಉಡುಪಿ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ ಮರದಿಂದಾಗಿ ಕಾರು ಅಲ್ಲೇ ಸ್ಟ್ರಕ್ ಆಗಿತ್ತು.
ಕಾರಿನಲ್ಲಿದ್ದ ಸಾಗರ ತಾಲೂಕಿನ ನಂದಿತಳೆ ನಿವಾಸಿಗಳಾದ ಮುರುಳಿ, ಶಶಿ ಮತ್ತು ನಾಗರಾಜ ಎಂಬುವವರು ಗಾಯಗೊಂಡಿದ್ದರು.
ಬಸ್ಸಿನಲ್ಲಿ ನಗರ ಠಾಣೆ ಎಎಸ್ಐ ಕುಮಾರ್ ಇದ್ದು, ಕೂಡಲೇ ಸ್ಥಳೀಯರ ಸಹಕಾರದಿಂದ ಕಾರಿನಲ್ಲಿದ್ದ ಗಾಯಾಳುಗಳನ್ನು ಕೆಳಗಿಳಿಸಿ ಅಂಬುಲೆನ್ಸ್ ಮೂಲಕ ಹೊಸನಗರ ಆಸ್ಪತ್ರೆಗೆ ಕಳುಹಿಸಿಕೊಟ್ಟರು.
ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…