Headlines

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ

IMG 20250611 WA0024

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ

ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ.

ಶಿವಮೊಗ್ಗ : ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್‌ ಮರ ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್‌ ಪೋಸ್ಟ್‌ ಸಮೀಪ ಮರ ಬುಡಮೇಲಾಗಿದೆ. ಚೆಕ್‌ ಪೋಸ್ಟ್‌ನ ಬಳಿಯಿದ್ದ ಬೃಹತ್‌ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ.

ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ.

ಈಗ ಹೆದ್ದಾರಿ ಪಕ್ಕದಲ್ಲಿರುವ ಕಿರಿದಾದ ದಾರಿಯ ಮೂಲಕ ವಾಹನಗಳು ಸಂಚರಿಸುತ್ತಿವೆ. ಸದ್ಯ ಆಲದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಇನ್ನು, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಹಲವು ಕಡೆ ಗಾಳಿ ಸಹಿತ ಮಳೆಯಾಗುತ್ತಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.