POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌

GridArt 20250617

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌

ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕೈಗಾರಿಕಾ ತ್ಯಾಜ್ಯವನ್ನು ಎಸೆಯುವ ಮೂಲಕ ಅರಣ್ಯ ಜೀವಿಗಳ ಸಂತತಿಯ ಮೇಲೆ ಪರಿಣಾಮ ಬೀರುವ ಮತ್ತು ಜೀವ ವೈವಿಧ್ಯತೆಯನ್ನು ಕಡಿಮೆ ಮಾಡುವ ಯತ್ನ ಕಿಡಿಗೇಡಿಗಳಿಂದ ನಡೆಯುತ್ತಿದೆ.

ಹೌದು ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಮೂಲಕ ಸಸ್ಯ ಮತ್ತು ಪ್ರಾಣಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುವಂತಹ ಯತ್ನ ನಡೆಯುತಿದ್ದು,ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯವನ್ನು ಎಸೆಯುವುದು ಪರಿಸರಕ್ಕೆ ಹಾನಿಕಾರಕ. ಕೈಗಾರಿಕಾ ತ್ಯಾಜ್ಯದಲ್ಲಿ ವಿಷಕಾರಿ ವಸ್ತುಗಳು ಇರಬಹುದು, ಇದು ಮಣ್ಣು, ನೀರು ಮತ್ತು ಗಾಳಿಯನ್ನು ಕಲುಷಿತಗೊಳಿಸುತ್ತದೆ. ಇದು ಸಸ್ಯ ಮತ್ತು ಪ್ರಾಣಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ, ಅರಣ್ಯ ಜೀವಿಗಳ ಆರೋಗ್ಯ ಮತ್ತು ಬದುಕುಳಿಯುವಿಕೆಗೆ ಬೆದರಿಕೆ ಹಾಕುತ್ತದೆ. ಪರಿಸರ ವ್ಯವಸ್ಥೆಯ ಸಮತೋಲನವನ್ನು ಹಾಳುಮಾಡುತ್ತದೆ.

ಈ ಘಟನೆಗಳ ಬಗ್ಗೆ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ್ ರವರ ಗಮನಕ್ಕೆ ಬರುತಿದ್ದಂತೆ ಸಂಬಂಧಪಟ್ಟ ಗ್ರಾಮ ಪಂಚಾಯತ್  ಕಛೇರಿಗೆ ಹಾಗೂ ಅರಣ್ಯ ಇಲಾಖೆಯವರಿಗೆ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ ಅರಣ್ಯದಲ್ಲಿ ವಾಸಿಸುವ ಪ್ರಾಣಿಗಳು ಮತ್ತು ಸಸ್ಯಗಳು ವಿಷಕಾರಿ ತ್ಯಾಜ್ಯದಿಂದ ಹಾನಿಗೊಳಗಾಗುತ್ತವೆ, ಇದು ಅವರ ಸಂತತಿಯ ಮೇಲೆ ಪರಿಣಾಮ ಬೀರಬಹುದು ಮತ್ತು ಜೀವವೈವಿಧ್ಯತೆಯನ್ನು ಕಡಿಮೆ ಮಾಡುತ್ತದೆ.ಕೈಗಾರಿಕಾ ತ್ಯಾಜ್ಯದಿಂದ ಕಲುಷಿತಗೊಂಡ ನೀರು ಮತ್ತು ಗಾಳಿಯನ್ನು ಸೇವಿಸುವುದರಿಂದ ಮಾನವರಲ್ಲಿಯೂ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.ಕೈಗಾರಿಕಾ ತ್ಯಾಜ್ಯವು ಪರಿಸರ ವ್ಯವಸ್ಥೆಯ ಸಮತೋಲನವನ್ನು ಹಾಳುಮಾಡುತ್ತದೆ, ಇದು ದೀರ್ಘಕಾಲೀನ ಪರಿಸರ ಸಮಸ್ಯೆಗಳಿಗೆ ಕಾರಣವಾಗಬಹುದು ಆದ್ದರಿಂದ ಅರಣ್ಯ ಪ್ರದೇಶದಲ್ಲಿ ಕೈಗಾರಿಕಾ ತ್ಯಾಜ್ಯ ವಿಲೇವಾರಿ ಮಾಡಬಾರದು ಎಂದು ಹೇಳಿದರು.

ಕೆಲವು ಕಿಡಿಗೇಡಿಗಳು ಕೈಗಾರಿಕಾ ತ್ಯಾಜ್ಯವನ್ನು ಅರಣ್ಯ ಪ್ರದೇಶಕ್ಕೆ ಎಸೆಯುವುದನ್ನು ತಡೆಯಲು, ನಾವು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಹಾಗೇಯೆ ಮುಂದಿನ ಪೀಳಿಗೆಗೆ ಅರಣ್ಯವನ್ನು ಸಂರಕ್ಷಿಸಿಕೊಳ್ಳಬೇಕಾಗಿದೆ ಎಂದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.