ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು.
ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು ಅನಂದಪುರ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ವಹಿಸಿ ಆಶಿರ್ವಚನ ನೀಡುವರು.ಮಹಾದ್ವಾರವನ್ನು ಹಾವೇರಿ ಜಿಲ್ಲೆ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ಪೀಠಾಧ್ಯಕ್ಷ ಜಗದ್ಗುರು ಶ್ರೀಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಉದ್ಘಾಟಿಸಲಿದ್ದಾರೆ ಎಂದರು.
ತೀರ್ಥಹಳ್ಳಿ ತಾಲೂಕಿನ ನಿಟ್ಟೂರು ನಾರಾಯಣಗುರು ಮಹಾಸಂಸ್ಥಾನ ಪೀಠಾಧ್ಯಕ್ಷರಾದರೇಣುಕಾನಂದ ಸ್ವಾಮಿಜಿ ಮತ್ತು ಶಿವಯೋಗಾಶ್ರಮ ಮೂಲೆಗದ್ದೆ ಮಠದ ಶ್ರೀ ಆಭಿನವಚನ್ನಬಸವ ಮಹಾಸ್ವಾಮಿಜಿ ಸಮ್ಮುಖ ವಹಿಸುವರು.ದೇವಸ್ಥಾನಕ್ಕೆ೧೦೮ ಸುಸಜ್ಜಿತ ಶಾಶ್ವತ ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿಲಾನ್ಯಾಸ ನೆರವೇರಿಸುವರು. ಶಾಸಕ ಹಾಗೂ ರಾಜ್ಯಅರಣ್ಯಕೈಗಾರಿಕಾಭಿವೃದ್ದಿ ನಿಗಮ ಆಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಮಾರಂಭದಆಧ್ಯಕ್ಷತೆ ವಹಿಸುವರು ಎಂದರು.
ಮುಖ್ಯಅತಿಥಿಗಳಾಗಿ ಜಿಲ್ಲಾಉಸ್ತುವಾರಿ ಮತ್ತುರಾಜ್ಯ ಪ್ರಾಥಮಿಕ ಪ್ರೌಢಶಿಕ್ಷಣ ಸಚಿವರಾದ ಮಧುಬಂಗಾರಪ್ಪ, ಭದ್ರವತಿ ಶಾಸಕ ಬಿ.ಕೆ.ಸಂಗಮೇಶ, ತೀರ್ಥಹಳ್ಳಿ ಶಾಸಕ ಆರಗಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್.ಭೋಜೆಗೌಡರು, ಎಸ್.ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಲ್ಕೀಶ್‌ಭಾನು, ಮತ್ತುಕೋಡೂರುಗ್ರಾಮ ಪಂಚಾಯ್ತಿ ಪ್ರಕಾಶಶೆಟ್ಟಿ, ಮಾರುತಿಪುರಗ್ರಾಮ ಪಂಚಾಯ್ತಿ ಅಧ್ಯಕ್ಷೆವ್ಜಯಮ್ಮ ಮತ್ತು ಮುಂಭಾರು ಗ್ರಾಮ ಪಂಚಾಯ್ತಿ ಆಧ್ಯಕ್ಷ ಎನ್.ಕುಮಾರ್ ಜಿಲ್ಲೆಯ ತಾಲ್ಲೂಕಿನ ಇನ್ನಿತರ ರಾಜಕೀಯ ಮುಖಂಡರು ಪಾಲ್ಗೊಳುವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸುದೀರ್‌ಭಟ್, ಕಟ್ಟಡಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಕೋಡೂರು ವಿಜೇಂದ್ರ, ಕೋಡೂರುಗ್ರಾಮ ಪಂಚಾಯ್ತಿ ಆಧ್ಯಕ್ಷಕೋಡೂರುಜಯರಾಮ ಶೆಟ್ಟರು, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದಪುಟ್ಟಪ್ಪ,ದೇವರಾಜ,ಹರೀಶಕಲ್ಯಾಣಪ್ಪಗೌಡರು,ಶ್ರೀನಿವಾಸಹಿಂಡ್ಲಮನೆ,ರತ್ನಮ್ಮ, ದೇವಸ್ಥಾನದ ಪ್ರಧಾನಅರ್ಚಕ ಭಾಸ್ಕರ್‌ಜೋಯ್ಸ್, ಇನ್ನಿತರ ರಿದ್ದರು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್