January 11, 2026

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ

ಗಾಂಜಾ ಸೇವಿಸಿ ವಾಹನ ಚಲಾಯಿಸುತಿದ್ದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.

ಆನಂದಪುರ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಆನಂದಪುರ ಪೊಲೀಸ್ ಠಾಣೆಯ ಮುಂಭಾಗ ವಾಹನಗಳ ತಪಾಸಣೆ ನಡೆಸುತ್ತಿರುವಾಗ ಸಾಗರ ಕಡೆಯಿಂದ ಲಾರಿಯೊಂದು ಅಡ್ಡದಿಡ್ಡಿಯಾಗಿ ಚಾಲನೆ ಮಾಡಿಕೊಂಡು ಬರುತ್ತಿರುವುದನ್ನು ಗಮನಿಸಿದ ಪಿಎಸ್ಐ ಪ್ರವೀಣ್ ಮತ್ತು ತಂಡ ವಾಹನವನ್ನು ನಿಲ್ಲಿಸಿ ವಿಚಾರಿಸಿದಾಗ ಆರೋಪಿಯು ಯಾವುದೋ ಅಮಲಿನಲ್ಲಿ ಇರುವುದು ಕಂಡುಬಂದಿದೆ.

ತಕ್ಷಣ ಆತನನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕಳುಹಿಸಿದಾಗ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ 25 ವರ್ಷದ ಯುವಕನ ಮೇಲೆ ಎನ್ ಡಿ ಪಿ ಎಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

About The Author