ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು.
ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ರಜಪೂತ್ ವಂಶದ ಕೆಚ್ಚೆದೆಯ ಕುಡಿಯಾಗಿದ್ದರು. ಅವರ ಧೈರ್ಯ, ತ್ಯಾಗ,ದೇಶಭಕ್ತಿ ಭಾರತೀಯ ಯುವ ಸಮೂಹಕ್ಕೆ ಸ್ಫೂರ್ತಿದಾಯಕವಾಗಿದ್ದು. ಅವರ ಮಾತೃಭೂಮಿ ಮೇಲಿರುವ ನಿಷ್ಠೆಗೆ, ಹಳದಿ ಘಾಟ್ ಕದನವೇ ಸಾಕ್ಷಿಯಾಗಿ ನಿಂತಿದೆ. ಅವರ ಭಾವಚಿತ್ರ ನೋಡಿದರೆ ಯುವಕರ ಮೈಮನ ಇಂದಿಗೂ ರೋಮಾಂಚನವಾಗುತ್ತದೆ ಎಂದು ಹೇಳಿದರು.
ಹರೀಶ ಸಿಂಗ್ ಭವಾನಿ ಸಭೆಯ ಅಧ್ಯಕ್ಷತೆ ವಹಿಸಿದರು, ಮಾಜಿ ಪುರಸಭೆ ಸದಸ್ಯ ಮಾಲತೇಶ್ ಬಾಬುಸಿಂಗನವರ್, ರತನ್ ಟೋಪಣ್ಣವರ್, ನಾರಾಯಣಸಿಂಗ್ ಬಾಬುಸಿಂಗನವರ್, ನಾರಾಯಣ ಸಿಂಗ್ ದೊಡ್ಡಮನಿ, ರಾಘುಸಿಂಗ್ ಬಾಬುಸಿಂಗನವರ್, ಧರ್ಮಸಿಂಗ್ ಡಂಬಳ್, ಭರತಸಿಂಗ್ ಚೌವ್ಹಿ, ಅರ್ಜುನ್ ಸಿದ್ದಪ್ಪನವರ್, ದುರ್ಗಾ ಸಿಂಗ್ ಕಲಘಟಗಿ, ನೇತಾಜಿ ಜಾದವ್, ನಾಗರಾಜ್ ಶಿವಪ್ಪನವರ್, ಪವನ್ ಸಿಂಗ್ ತೆರಸನ್ನವರ್ ಮುಂತಾದ ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್