ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ‌.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಳೆ ಮತ್ತು ಗಾಳಿ ವ್ಯಾಪಕವಾಗುತ್ತಿರುವುದರಿಂದ ಮನೆ ಹಾನಿಯಾದರೆ /ಇತರೆ ಹಾನಿಯಾದರೆ ಕೂಡಲೇ VA, RI ಹಾಗೂ ಪಿಡಿಒಗಳು ಸೇರಿದಂತೆ ಇತರೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.

ಇನ್ನೂ ಮಳೆ ಹಾನಿ ಪರಿಹಾರಕ್ಕೆ ವರದಿ ಸಲ್ಲಿಸಿ, ಮಾಹಿತಿಯನ್ನು ಕಛೇರಿಗೆ ನೀಡಿ, ಹೆಚ್ಚಿನ ಮನೆ ಹಾನಿಯಾಗಿದ್ದಲ್ಲಿ ಪಂಚಾಯಿತಿವತಿಯಿಂದ ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ನೀಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

42 minutes ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

56 minutes ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

8 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

12 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

12 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

24 hours ago