ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!
ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ.
ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು.
ಮೃತ ದೇವರಾಜ ವಿವಾಹವಾಗಿ ಕೇವಲ 10 ದಿನಗಳಾಗಿದ್ದವು ಎಂದು ತಿಳಿದುಬಂದಿದೆ. ಘಟನೆ ಬಳಿಕ ಸ್ಥಳೀಯರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ದೇವರಾಜ್ ಮೃತಪಟ್ಟಿದ್ದಾರೆ.
ಘಟನೆ ಕುರಿತು ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.