ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರು ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಗವಟೂರು ಸಮೀಪದ ಮಲ್ಲಾಪುರ ನಿವಾಸಿ ಬಿನು (19) ಬಂಧಿತ ಆರೋಪಿಯಾಗಿದ್ದಾನೆ.
ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.
https://youtu.be/Anq8r0tKKWY?si=MMQsI_j5OB6YQezZ
ಘಟನೆಯ ಹಿನ್ನಲೆ :
ಗವಟೂರು ಬಸ್ ನಿಲ್ದಾಣದ ಬಳಿಯಲ್ಲಿ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಕಂಡು ಆತನ ಬಳಿ ಹೋಗಿ ಆತನನ್ನು ವಿಚಾರಿಸಿದ್ದಾರೆ.
ಈ ಸಮಯದಲ್ಲಿ ಆರೋಪಿಯ ಮಾತು ತೊದಲುತ್ತಿದ್ದು, ಬಾಯಿಯಿಂದ ಅಮಲು ಪದಾರ್ಥ ಸೇದಿದ ವಾಸನೆ ಬರುತ್ತಿದ್ದರಿಂದ, ಆತನನ್ನು ಕೂಲಂಕುಷವಾಗಿ ವಿಚಾರಿಸಿದಾಗ ಆತನು ಬೀಡಿ ಜೊತೆ ಗಾಂಜಾ ಸೇರಿಸಿ ಸೇದಿದ ಬಗ್ಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಕೂಡಲೇ ಆತನನ್ನು ವೈದ್ಯಕೀಯ ತಪಾಸಣೆಗೆ ಮೆಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು, ಆತನು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದಕೀಯ ಪರೀಕ್ಷೆಯಿಂದ ದೃಡಪಟ್ಟಿರುವುದರಿಂದ ಈತನ ವಿರುದ್ಧ ಮಾದಕ ದ್ರವ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು 9480803365 ನಂಬರಿಗೆ ಕರೆ ಮಾಡುವ ಮೂಲಕ ತಿಳಿಸುವ ಮೂಲಕ ಇಲಾಖೆಗೆ ಸಹಕರಿಸಬೇಕಾಗಿದೆ ಹಾಗೇಯೇ ಮಾಹಿತಿದಾರರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು ಎಂದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…