ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ
ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆರ್.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆ 2002ರ ಅಡಿಯಲ್ಲಿ ಆರ್.ಎಂ.ಮಂಜುನಾಥ ಗೌಡ ಮತ್ತು ಅವರ ಪತ್ನಿಯ ಹೆಸರಿನಲ್ಲಿರುವ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.
ನಕಲಿ ಬಂಗಾರ ಅಡಮಾನ ಪ್ರಕರಣ ಸಂಬಂಧ ಏಪ್ರಿಲ್ 8ರಂದು ಶಿವಮೊಗ್ಗ ಮತ್ತು ಬೆಂಗಳೂರಿನ ವಿವಿಧೆಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.
ಈ ಸಂದರ್ಭ ಡಿಜಿಟಲ್ ಸಾಕ್ಷಿ ಸೇರಿದಂತೆ ವಿವಿಧ ಸಾಕ್ಷಿ ಲಭ್ಯವಾಗಿತ್ತು. ಅಲ್ಲದೆ 2.5 ಕೆ.ಜಿ ಚಿನ್ನಾಭರಣ ವಶಕ್ಕೆ ಪಡೆಯಲಾಗಿತ್ತು. ಏಪ್ರಿಲ್ 9ರಂದು ಮಂಜುನಾಥ ಗೌಡ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಮಂಜುನಾಥ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.