ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ
ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ
ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ರಾಜು ರೆಡ್ಡಿ ಬೆನ್ನೂರು ರಿಪ್ಪನ್ ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು.
ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ಪಿಎಸ್‌ಐ ರಾಜುರೆಡ್ಡಿ ರವರು ಲೋಕಸಭಾ ಚುನಾವಣಾ ಸಂಧರ್ಭದಲ್ಲಿ ಹೊಸನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು.