ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ
ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ ಸಂಘಟನೆಯಲ್ಲಿ ಸಂಘ,ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.
ನೂತನ ಅಧ್ಯಕ್ಷ ಸೋಮಣ್ಣ ಕುರಿ ಅವರನ್ನು ಶಿಗ್ಗಾವಿಯಲ್ಲಿ ಸನ್ಮಾನಿಸಿದ ಯಾಸಿರಖಾನ್ ಪಠಾಣ್ ಪಕ್ಷದ ತತ್ವ, ಸಿದ್ಧಾಂತದಡಿ ಸಂಘಟನೆಯ ಜವಾಬ್ದಾರಿಯನ್ನು ನಿರ್ವಹಿಸುವಂತೆ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಪಕ್ಷದ ಮುಖಂಡರು ಅಧ್ಯಕ್ಷರನ್ನು ಸನ್ಮಾನಿಸಿದರು .
ಮುಖಂಡರಾದ ಎಸ್. ಎಪ್ ಮಣಕಟ್ಟಿ, ಸುಧೀರ್ ಲಮಾಣಿ, ಮಾಲತೇಶ್ ಸಾಲಿ, ಯಲ್ಲಪ್ಪ ನರಗುಂದ ಮುಂತಾದ ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್