w
Headlines
Home » ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ

N66840477417499083031020f815d4fc0115377d3e404aa2cf3d3ffbc4f608e5c8a9ab632e473527545b794

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ

“ಥ ಇನ್ಫರ‍್ಮೇಶನ್ ಸೋರ್ಸ್ ಫಾರ್ ಮೇಕಿಂಗ್ ಪ್ರೋಟಿನ್ ಇನ್ ದ ಸೆಲ್ಸ್ ಇಸ್” ಎಂಬ ಬಹು ಆಯ್ಕೆಯ ಪ್ರಶ್ನೆಗೆ ಕೇಳಲಾಗಿತ್ತು. ಅದಕ್ಕೆ ಜೀನ್, ಕ್ರೋಮೋಜೋಮ್, ಡಿಎನ್‌ಎ, ರೈಬೊಝೋಮ್ ಎಂಬ ನಾಲ್ಕು ಆಯ್ಕೆ ಇತ್ತು. ಜೀನ್ ಸಹ ಪ್ರೋಟಿನ್ ಸೆಲ್ ಎಂದು ಸಂಜನಾ ಉತ್ತರ ನೀಡಿದ್ದಳು. ಆದರೆ ಸರಿಯಾದ ಉತ್ತರ ಡಿಎನ್‌ಎ ಎಂದಿತ್ತು.

ಶಿವಮೊಗ್ಗ: ಒಂದು ಅಂಕದಿಂದ ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಕನಸು ತಪ್ಪಿಸಿಕೊಂಡಿದ್ದ ಹುಡುಗಿ ಅದೇ ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಎದುರಿಸಿ 625 ಕ್ಕೆ 625ಕ್ಕೆ ಅಂಕ ಪಡೆದು ವಿಶೇಷ ಸಾಧನೆ ಮಾಡಿದ್ದಾಳೆ.

ಎಸೆಸೆಲ್ಸಿ ಪರೀಕ್ಷೆ-2ರ ಫಲಿತಾಂಶವು ಶುಕ್ರವಾರದಂದು ಪ್ರಕಟವಾಗಿದ್ದು, ಹಿಂದಿನ ಫಲಿತಾಂಶದ ವೇಳೆ ಕೇವಲ ಒಂದು ಅಂಕದಿಂದ ಎಸೆಸೆಲ್ಸಿಯಲ್ಲಿ ಗರಿಷ್ಠ ಅಂಕ ಗಳಿಸುವ ಅವಕಾಶ ತಪ್ಪ್ಪಿಸಿಕೊಂಡಿದ್ದ ವಿದ್ಯಾರ್ಥಿನಿ, ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625ಕ್ಕೆ ಗಳಿಸಿ ಸಾಧನೆ ಮಾಡಿದ್ದಾರೆ.

ಈ ಹಿಂದಿನ ಫಲಿತಾಂಶದ ವೇಳೆ ಶಿವಮೊಗ್ಗದ ಆದಿಚುಂಚನಗಿರಿ ಪ್ರೌಢ ಶಾಲೆಯ ಸಂಜನಾ.ಎಸ್ 624ಅಂಕ ಪಡೆದಿದ್ದರು. ವಿಜ್ಞಾನ ವಿಷಯದಲ್ಲಿ ಒಂದು ಅಂಕ ಕಡಿತವಾಗಿತ್ತು. ಒಂದು ಅಂಕದಿಂದ ರಾಜ್ಯಕ್ಕೆ ಟಾಪರ್ ಆಗುವ ಅವಕಾಶದಿಂದ ವಂಚಿತರಾಗಿದ್ದ ಸಂಜನಾ ಮತ್ತೆ ವಿಜ್ಞಾನ ವಿಷಯ ಪರೀಕ್ಷೆ ಬರೆದು 80ಕ್ಕೆ 80 ಅಂಕ ಪಡೆದಿದ್ದಾರೆ.

ಈ ಮೂಲಕ 625ಕ್ಕೆ 625ಕ್ಕೆ ಅಂಕ ಪಡೆದ ಸಾಧನೆ ಮಾಡಿದ್ದಾರೆ. “ಥ ಇನ್ಫರ‍್ಮೇಶನ್ ಸೋರ್ಸ್ ಫಾರ್ ಮೇಕಿಂಗ್ ಪ್ರೋಟಿನ್ ಇನ್ ದ ಸೆಲ್ಸ್ ಇಸ್” ಎಂಬ ಬಹು ಆಯ್ಕೆಯ ಪ್ರಶ್ನೆಗೆ ಕೇಳಲಾಗಿತ್ತು. ಅದಕ್ಕೆ ಜೀನ್, ಕ್ರೋಮೋಜೋಮ್, ಡಿಎನ್‌ಎ, ರೈಬೊಝೋಮ್ ಎಂಬ ನಾಲ್ಕು ಆಯ್ಕೆ ಇತ್ತು. ಜೀನ್ ಸಹ ಪ್ರೋಟಿನ್ ಸೆಲ್ ಎಂದು ಸಂಜನಾ ಉತ್ತರ ನೀಡಿದ್ದಳು. ಆದರೆ ಸರಿಯಾದ ಉತ್ತರ ಡಿಎನ್‌ಎ ಎಂದಿತ್ತು. ಜೀನ್ ಸಹ ಸರಿ ಉತ್ತರ ಎಂಬುದು ಅನೇಕರ ವಾದ. ಆದರೂ ಒಂದು ಅಂಕದಿಂದ ರಾಜ್ಯಕ್ಕೆ ಟಾಪರ್ ಆಗುವ ಅವಕಾಶದಿಂದ ವಂಚಿತಳಾದ ಸಂಜನಾ ಮತ್ತೆ ಬಯಾಲಾಜಿ ಪರೀಕ್ಷೆ ಬರೆದು 80ಕ್ಕೆ 80 ಅಂಕ ಪಡೆದಿದ್ದಾಳೆ. ಈ ಮೂಲಕ 625ಕ್ಕೆ 625ಕ್ಕೆ ಅಂಕ ಪಡೆದ ಸಾಧನೆ ಮಾಡಿದ್ದಾಳೆ.

ಸಂಜನಾ ತಂದೆ ಸುರೇಶ್.ಎಂ ಪೊಲೀಸ್ ಇಲಾಖೆಯಲ್ಲಿ ಎಸ್‌ಎಸ್‌ಐ ಕೆಲಸ ಮಾಡುತ್ತಿದ್ದ ತಾಯಿ ರೇಖಾ.ಎಸ್ ಗೃಹಿಣಿಯಾಗಿದ್ದಾರೆ.

625ಕ್ಕೆ 625 ಪಡೆದವರಿಗೆ ಸಿಎಂ ಅವರಿಂದ ಸಂಘ ಸಂಸ್ಥೆಗಳಿಂದ ಸನ್ಮಾನ ಸಿಕ್ಕಿದೆ. ಕಳೆದ ಬಾರಿಯೇ ಅವರಿಗೆ ಪೂರ್ಣ ಅಂಕ ಬರಬೇಕಿತ್ತು. ಮತ್ತೊಮ್ಮೆ ಪರೀಕ್ಷೆ ಎದುರಿಸಿ ಪೂರ್ಣ ಅಂಕ ಪಡೆದವರಿಗೆ ಸನ್ಮಾನ ಬೇಕಿದೆ ಎನ್ನುತ್ತಾರೆ ಶಾಲೆಯ ಆಡಳಿತ ಮಂಡಳಿ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.