ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು
ಸಾಗರ : ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ ನೀಡಿದ್ದಾರೆ.
ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆ ನಡೆಸಿದ ದೌರ್ಜನ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಮಂಜುನಾಥ್ ಆರೋಗ್ಯ ವಿಚಾರಿಸಿ, ಪ್ರವಾಸಿ ಮಂದಿರದಲ್ಲಿ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಒಂದೊಮ್ಮೆ ಬೇಟೆ ಇನ್ನಿತರೆ ಚಟುವಟಿಕೆಯಲ್ಲಿ ತೊಡಗಿದ್ದರೆ ಅವರ ಮೇಲೆ ಕೇಸ್ ಹಾಕಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರಿಗೆ ಒಪ್ಪಿಸಿ. ನಿಮಗೆ ಹೊಡೆಯುವ ಅಧಿಕಾರ ಇಲ್ಲ. ತುಮರಿಯ ಮಂಜುನಾಥ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ವೈದ್ಯಕೀಯ ವರದಿಯಲ್ಲಿ ಕಂಡು ಬಂದಿದೆ. ಪಕ್ಕೆಲುಬು ಮುರಿದು ಉಸಿರಾಟಕ್ಕೆ ತೊಂದರೆಯಾಗಿದೆ. ಮಂಜುನಾಥ್ ಅವರ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಮತ್ತೊಂದು ಸುತ್ತಿನ ವರದಿ ನೀಡಲು ವೈದ್ಯರಿಗೆ ತಿಳಿಸಿದ್ದೇನೆ. ವರದಿ ಬಂದ ನಂತರ ದೌರ್ಜನ್ಯ ನಡೆಸಿದ ಅರಣ್ಯ ಅಧಿಕಾರಿಗಳ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ. ನಿಮ್ಮ ವರ್ತನೆ ಬಗ್ಗೆ ಅರಣ್ಯ ಸಚಿವರಿಗೆ ಸಹ ತಿಳಿಸುತ್ತೇನೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬದ್ದವಾಗಿರಬೇಕು. ಈಚೆಗೆ ವಿಜಯನಗರ ಬಡಾವಣೆಯಲ್ಲಿ ಸದಾನಂದ ಎಂಬುವವರ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನು ಬಿಟ್ಟು ಕಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಆರೋಪಿಗಳನ್ನು ಬಿಟ್ಟು ಕಳಿಸಿದ್ದು ಏಕೆ ಎಂದು ಪ್ರಶ್ನಿಸಿದ ಶಾಸಕರು ಠಾಣಾ ಜಾಮೀನಿನಲ್ಲಿ ಬಿಡುಗಡೆ ಮಾಡಿದ ಪೊಲೀಸ್ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಡಿವೈಎಸ್‍ಪಿಗೆ ಸೂಚನೆ ನೀಡಿದರು.
ತಾಲ್ಲೂಕಿನಲ್ಲಿ ಕೊಲೆ ಸುಲಿಗೆ, ಇಸ್ಪೀಟ್, ಓಸಿ ಇನ್ನಿತರೆ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವವರನ್ನು ರೌಡಿಪಟ್ಟಿಗೆ ಸೇರಿಸಿ, ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. . ಕಾನೂನು ವ್ಯವಸ್ಥೆ ಹಾಳಾಗಿದೆ ಎಂದು ವಿಪಕ್ಷದವರು, ಸಾರ್ವಜನಿಕರು ನನ್ನ ಕಡೆ ಬೆರಳು ತೋರಿಸಬಾರದು. ಸಾಗರ ನಗರ ಠಾಣೆ ಮತ್ತು ತುಮರಿಯಲ್ಲಿ ಪೊಲೀಸ್ ಠಾಣೆ ಮಾಡಲು ಜಾಗ ಗುರುತಿಸಲಾಗುತ್ತಿದೆ. ಸದ್ಯದಲ್ಲಿಯೆ ಕಾಮಗಾರಿ ಪ್ರಾರಂಭಿಸಲು ಅಗತ್ಯ ಗಮನ ಹರಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಮುಖರಾದ ಗಣಪತಿ ಮಂಡಗಳಲೆ, ಮಧುಮಾಲತಿ, ಸೋಮಶೇಖರ ಲ್ಯಾವಿಗೆರೆ, ಗಣಪತಿ ಮಂಡಗಳಲೆ, ಜಿ.ಟಿ.ಸತ್ಯನಾರಾಯಣ ಇನ್ನಿತರರು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್