RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ!

ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಹೌದು ಶಿವಮೊಗ್ಗದಲ್ಲಿ RCB ಗೆದ್ದ ಖುಷಿಯಲ್ಲಿ ಸಂಭ್ರಮಾಚರಣೆ ಜೋರಾಗಿತ್ತು ಎಲ್ಲೆಡೆ ಪಟಾಕಿ ಸಿಡಿಸಿ, ಯುವಕರು ಕುಣಿದು ಕುಪ್ಪಳಿಸುತ್ತಿದ್ದರು. ಆದರೆ ಸೆಲೆಬ್ರೇಶನ್ ವೇಳೆ ಆರ್ಸಿಬಿ ಅಭಿಮಾನಿಯೊಬ್ಬ ಸಾವನಪ್ಪಿದ್ದಾನೆ.
ಅಪಘಾತದಲ್ಲಿ ಅಭಿ ಎನ್ನುವ ಯುವಕ ದುರ್ಮರಣ ಹೊಂದಿದ್ದಾನೆ.
ಬೈಕ್ ನಲ್ಲಿ ಸೆಲೆಬ್ರೇಶನ್ ಮಾಡುವ ವೇಳೆ ಅಪಘಾತ ಸಂಭವಿಸಿದೆ 2 ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನಪ್ಪಿದ್ದಾನೆ.
ಘಟನೆ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.