ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ

ಬಂಕಾಪುರ: ಶಾಂತಿ ಸುವ್ಯವಸ್ಥೆ ಕಾಪಾಡಲು ತಮ್ಮ ಸೇವಾವಧಿಯಲ್ಲಿ ಬಂಕಾಪುರ ಜನರು ನೀಡಿರುವ ಸಹಕಾರ ಜೀವನ ಉಸಿರಿರುವವರೆಗೂ ಮರೆಯಲ್ಲ ಎಂದು ವರ್ಗಾವಣೆಗೊಂಡ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು.

ಸೋಮವಾರ ಪಟ್ಟಣದ ಹಳ್ಳಿಕೇರಿ ಬಸವಣ್ಣ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭ ದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ನನ್ನ ಕರ್ತವ್ಯದ ಅವಧಿಯಲ್ಲಿ ಬಂಕಾಪುರದ ಜನತೆ ನೀಡಿದ ಸಹಕಾರ, ಬೆಂಬಲ ಮತ್ತು ನಂಬಿಕೆಗೆ ನಾನು ತುಂಬು ಹೃದಯದಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮ ಸಹಕಾರವಿಲ್ಲದೆ ನಾನು ನನ್ನ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಿರಲಿಲ್ಲ ಎಂದರು.

ಇಲ್ಲಿನ ಜನರೊಂದಿಗೆ ಕೆಲಸ ಮಾಡಿದ್ದು ನನಗೆ ಉತ್ತಮ ಅನುಭವ ನೀಡಿದೆ. ಜನರ ಸಮಸ್ಯೆಗಳನ್ನು ಆಲಿಸಲು ಮತ್ತು ಅವುಗಳನ್ನು ಪರಿಹರಿಸಲು ಪ್ರಯತ್ನಿಸಿದ್ದು ನನಗೆ ತೃಪ್ತಿ ನೀಡಿದೆ. ನನ್ನ ಅನುಪಸ್ಥಿತಿಯಲ್ಲಿಯೂ, ಪೊಲೀಸ್ ಇಲಾಖೆಯು ನಿಮ್ಮ ಸೇವೆಗೆ ಸದಾ ಸಿದ್ಧವಾಗಿರುತ್ತದೆ. ಈ ಹಿಂದೆ ಪಟ್ಟಣದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆಗೆ ರಾಜ್ಯದ ನಾಲ್ಕು ಜಿಲ್ಲೆಗಳಿಂದ ಪೊಲೀಸ್ ಬಂದೋಬಸ್ತ್ ನಡೆಯುತಿತ್ತು. ಆದರೆ, ನಾನು ಇಲ್ಲಿಗೆ ಬಂದ ಬಳಿಕ ಜನರಿಂದ ವ್ಯಕ್ತವಾದ ಪ್ರೀತಿ, ವಿಶ್ವಾಸದ ಸಹಕಾರದಿಂದ ಎರಡು ವರ್ಷ,ಕೇವಲ ಎರಡು ಜಿಲ್ಲೆ ಪೊಲೀಸರ ಸಹಕಾರದಿಂದ ವಿಸರ್ಜನೆ ನಡೆದಿದೆ ಇದಕ್ಕೆ ಬಂಕಾಪುರದ ಸಮಸ್ತ ಜನರ ಸಹಕಾರ ಕಾರಣ ಎಂದರು.

ಇದೇ ಸಂಧರ್ಭದಲ್ಲಿ ಹಾವೇರಿಗೆ ವರ್ಗಾವಣೆಯಾದ ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ ಐ ಲಿಂಗರಾಜ ಕರಕಣ್ಣವರ ಅವರನ್ನು ಗ್ರಾಮಸ್ಥರು ಹಾಗೂ ಸಂಘ ಸಂಸ್ಥೆಯವರು ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಪುರಸಭೆ ಸದಸ್ಯ ಸುರೇಶ ಕುರಗೋಡಿ ಮಾತನಾಡಿ ಒಬ್ಬ ಅಧಿಕಾರಿ ಉತ್ತಮವಾಗಿ ಕಾರ್ಯನಿರ್ವಹಿಸಿ ವರ್ಗಾವಣೆಯಾದಾಗ, ಸಾರ್ವಜನಿಕರು ಸಾಮಾನ್ಯವಾಗಿ ಅವರ ಕಾರ್ಯಕ್ಷಮತೆಯನ್ನು ಗುರುತಿಸಿ ಮೆಚ್ಚುತ್ತಾರೆ ಅಂತಹವರ ಸಾಲಿನಲ್ಲಿ ಪಿಎಸ್‌ಐ ನಿಂಗರಾಜ್ ಕೆ ಮುಂಚೂಣಿಯಲ್ಲಿರುತ್ತಾರೆ. ಪಿಎಸ್‌ಐ ನಿಂಗರಾಜ್ ಕೆ ವೈ ರವರ ಕಾರ್ಯವೈಖರಿಯಿಂದ ಪೊಲೀಸ್ ಅಧಿಕಾರಿಗಳ ಬಗ್ಗೆ ಜನರಲ್ಲಿ ಗೌರವ ಹೆಚ್ಚುತ್ತದೆ ಎಂದರು.

ಈ ಸಂಧರ್ಭದಲ್ಲಿ ರಾಮಕೃಷ್ಣ ರಾಯ್ಕರ, ಆಂಜನೇಯ ಗುಡಗೇರಿ, ರಮೇಶ ಸಿದ್ದುನವರ, ರುದ್ರಣ್ಣ ಪವಾಡಿ, ರಾಜು ಹುಲಮನಿ, ರಮೇಶ ಹಂಚಾಟೆ, ಸ್ಮಶಾನ ಸಮಿತಿ ಅಧ್ಯಕ್ಷ ಬಾಪುಗೌಡ್ರ ಮೀನಪ್ಪಗೌಡ್ರ, ಗಂಗಾಧರ ಪೂಜಾರ, ಶಿವಪ್ಪ ಮಾಗಿ, ರವಿ ನರೇಗಲ್ಲ, ರವಿ ಮಾಳಗಿಮನಿ ಮತ್ತಿತರರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago