ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ
ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ
ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ ಸಮೀಪದಲ್ಲಿರುವ ಕೋಡೂರಿನಲ್ಲಿ ಈ ಘಟನೆ ನಡೆದಿದೆ. ಉಡುಪಿ ಕಡೆಗೆ ತೆರಳುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದರೆ ಶಾಸಕರು ಹಾಗೂ ಕಾರಿನಲ್ಲಿ ಇದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗದ ಕಡೆಗೆ ಶಾಸಕರ ಕಾರು ಚಲಿಸುತ್ತಿದ್ದ ವೇಳೆಯಲ್ಲಿ ಜಾನುವಾರು ಅಡ್ಡಬಂದಿದೆ. ಈ ವೇಳೆಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಆದರೆ ಯಾರಿಗೂ ಯಾವುದೇ ಅಪಾಯ ಉಂಟಾಗಿಲ್ಲ.
ಉಡುಪಿಗೆ ತೆರಳಬೇಕಾಗಿದ್ದ ಶಾಸಕರು ಸದ್ಯ ಬೇರೊಂದು ಕಾರಿನ ಮೂಲಕ ಬೈಂದೂರಿಗೆ ತೆರಳಿದ್ದಾರೆ.
ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.