ಲಾರಿ ಹರಿದು ಮೂರು ವರ್ಷದ ಬಾಲಕ ಸಾವು
ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ ಬಾನು ದೂರಿದ್ದಾರೆ..
ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ ಪುತ್ರ ಮುಹಮ್ಮದ್ ಆಹಿಲ್ ಖಾನ್ (೩) ಮೃತ ಬಾಲಕ.
ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ ಬಾನು ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಬಾಲಕ ತಂದೆ ಉದ್ಯೋಗ ನಿಮಿತ್ತ ದುಬೈನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುದ್ದಿಗಾರರೊಂದಿಗೆ ಗ್ರಾಮ ಸಲಹಾ ಸಮಿತಿ ಅಧ್ಯಕ್ಷ ಬಿ. ಈಶ್ವರಪ್ಪ ಮಾತನಾಡಿ, ಗ್ರಾಮದಲ್ಲಿ ರಸ್ತೆ ಅಗಲೀಕರಣವಾಗುತ್ತಿದೆ. ಅಂಗನವಾಡಿ ಕೇಂದ್ರವು ರಸ್ತೆಯ ಪಕ್ಕದಲ್ಲಿರುವುದೇ ಘಟನೆಗೆ ಕಾರಣ. ಅದನ್ನು ಸ್ಥಳಾಂತರ ಮಾಡಬೇಕು. ನೂತನ ಅಂಗನವಾಡಿ ಕಟ್ಟಡವನ್ನು ಗ್ರಾಮದ ಒಳ ಭಾಗದಲ್ಲಿ ನಿರ್ಮಿಸಲು ನಿವೇಶನ ನೀಡಲಾಗುವುದು. ಜೊತೆಗೆ, ಟಿಪ್ಪರ್, ಕ್ಯಾಂಟರ್ ಸೇರಿದಂತೆ ಇತರೆ ಲಾರಿಗಳು ಗ್ರಾಮಗಳ ಪರಿಮಿತಿಯಲ್ಲಿ ವೇಗಮಿತಿಯಿಲ್ಲದೇ ವಾಹನ ಚಲಾಯಿಸುತ್ತಾರೆ. ಅವರ ಮೇಲೆ ಸಂಬಂಧ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply